ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RSS Ban Row: ಆರ್‌ಎಸ್‌ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ

CM Siddaramaiah: 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ-ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್‌ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ನಿಷೇಧಿಸಿಲ್ಲ, ಶೆಟ್ಟರ್ ಆದೇಶವನ್ನೇ ಹೊರಡಿಸಿದ್ದೇವೆ

-

Profile Siddalinga Swamy Oct 20, 2025 6:56 PM

ಪುತ್ತೂರು: ಸರ್ಕಾರ ಆರ್‌ಎಸ್‌ಎಸ್ ನಿಷೇಧ (RSS Ban Row) ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್‌ಎಸ್‌ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಪುತ್ತೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ-ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್‌ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ಅನುಮತಿ ನೀಡುವುದು ಕಡ್ಡಾಯವಲ್ಲ

ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ, ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಈ ಸುದ್ದಿಯನ್ನೂ ಓದಿ | CM Siddaramaiah: ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ನೂಕುನುಗ್ಗುಲು; 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪುತ್ತೂರು: ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ನೂಕುನುಗ್ಗುಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur News) ನಡೆದಿದೆ. ಶಾಸಕ ಅಶೋಕ್‌ ರೈ ಅವರ ಟ್ರಸ್ಟ್‌ನಿಂದ ಆಯೋಜಿಸಿದ್ದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ನೂಕು ನುಗ್ಗುಲು ಉಂಟಾಗಿ, ಮಹಿಳೆಯರು, ಮಕ್ಕಳು ಸೇರಿ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

ಯೋಗಿತ (20), ಸಭಾ ಮಾಡಾವು (20), ಆಮೀನಾ ಪಾಟ್ರಕೋಡಿ (56), ನೇತ್ರಾವತಿ ಇರ್ದೆ (37), ಲೀಲಾವತಿ ಕಡಬ (50), ವಸಂತಿ ಬಲ್ನಾಡ್ (53), ಕುಸುಮ (62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಅಸ್ವಸ್ಥರಾದವರು.

ಈ ಸುದ್ದಿಯನ್ನೂ ಓದಿ | KSET 2025: ಕೆಸೆಟ್ ಪರೀಕ್ಷೆ ಮುಂದೂಡಿ; ಕೆಇಎಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂಕು ನುಗ್ಗಲು ಉಂಟಾಗಿದ್ದರಿಂದ ಅಸ್ವಸ್ಥರಾದವರು ಕುಡಿಯಲು ನೀರು ಸಿಗದೆ ಪರದಾಡಿದ್ದಾರೆ. ಪುತ್ತೂರು ತಾಲೂಕು ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.