ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Soujanya Case: ಸೌಜನ್ಯಾ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು?: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ಹೀಗಿದೆ

Dharmasthala Chalo: ಧರ್ಮಸ್ಥಳ ಚಲೋ ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಸೇರಿ ವಿವಿಧ ನಾಯಕರು, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಬಿಜೆಪಿ ನಾಯಕರು ಅಭಯ ನೀಡಿದ್ದಾರೆ.

ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆ ನಡೆಯಲಿ: ವಿಜಯೇಂದ್ರ

-

Prabhakara R Prabhakara R Sep 1, 2025 7:12 PM

ಧರ್ಮಸ್ಥಳ: ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಿ. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಬೆಂಬಲ ಕೊಡುತ್ತೇವೆ. ಇದಕ್ಕಾಗಿ ತನಿಖಾ ಆಯೋಗ ರಚಿಸಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಸೌಜನ್ಯಾ ಪ್ರಕರಣದಲ್ಲಿ (Soujanya Case) ಬಿಜೆಪಿ ನಿಲುವು ಏನು ಎಂಬ ಪ್ರಶ್ನೆಗೆ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಸೇರಿ ವಿವಿಧ ನಾಯಕರು, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ (Soujanya Case) ಭೇಟಿ, ಮಾತುಕತೆ ನಡೆಸಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಜತೆ ವಿಜಯೇಂದ್ರ ಮಾತುಕತೆ ನಡೆಸಿ, ಸೌಜನ್ಯಪರ ಹೋರಾಟದಲ್ಲಿ ಜತೆಗಿರುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಬಿ.ವೈ. ವಿಜಯೇಂದ್ರ ಮುಂದೆ, ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ತಾಯಿ ಕುಸುಮಾವತಿ ಕಣ್ಣೀರು ಹಾಕಿದ್ದಾರೆ.



ಈ ಬಗ್ಗೆ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಶಿಕ್ಷೆಯಿಂದ ತಪ್ಪಿಸಿಕೊಂಡು ತಿರುಗುತ್ತಿರುವುದು ಬಹುದೊಡ್ಡ ವಿಪರ್ಯಾಸ.

ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು, ಪ್ರಕರಣ ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Dharmasthala Chalo: ಧರ್ಮಸ್ಥಳ ವಿರುದ್ಧ ಪಿತೂರಿ ಕುರಿತು ಎನ್‌ಐಎ ತನಿಖೆಯಾಗಲಿ: ಬಿ.ವೈ. ವಿಜಯೇಂದ್ರ ಒತ್ತಾಯ