ಮಾನಸಿಕ ಒತ್ತಡ, ಆತಂಕ, ಭಯ ನಿರ್ಲಕ್ಷಿಸಬೇಡಿ: ವಿದ್ಯಾರ್ಥಿಗಳಿಗೆ ಶಿಕ್ಷಕಿ ಅಲೀನಾ ಜಾನ್ ಕರೆ
World Mental Health Day: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಮನೋವಿಜ್ಞಾನ ವಿಭಾಗ ಹಾಗೂ ಕೌನ್ಸೆಲಿಂಗ್ ಸೆಲ್ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ‘ಪೋಸ್ಟರ್ ಎಕ್ಸಿಬಿಷನ್ʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಿತು -
ಉಜಿರೆ, ಅ. 6: ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಮನೋವಿಜ್ಞಾನ ವಿಭಾಗ ಹಾಗೂ ಕೌನ್ಸೆಲಿಂಗ್ ಸೆಲ್ ವತಿಯಿಂದ ಸೋಮವಾರ ‘ಪೋಸ್ಟರ್ ಎಕ್ಸಿಬಿಷನ್ʼ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆಯ ಶಿಕ್ಷಕಿ ಅಲೀನಾ ಜಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟೇ ಮಹತ್ವದ್ದಾಗಿದ್ದು, ಮಾನಸಿಕ ಒತ್ತಡ, ಆತಂಕ, ಭಯ ಹಾಗೂ ಇತರ ಭಾವನಾತ್ಮಕ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು. ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದು ಹಾಗೂ ಅಗತ್ಯವಿದ್ದಾಗ ಪೋಷಕರು, ಶಿಕ್ಷಕರು ಅಥವಾ ತಜ್ಞರ ಸಹಾಯ ಪಡೆಯುವುದು ಮುಖ್ಯ ಎಂದರು.
ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡ, ಸ್ಪರ್ಧೆ, ಸಾಮಾಜಿಕ ಮಾಧ್ಯಮದ ಪ್ರಭಾವ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಹಿಡಿದು ವಿವಿಧ ರೀತಿಯ ಮಾನಸಿಕ ಒತ್ತಡವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡುವ ವಾತಾವರಣ ನಿರ್ಮಾಣವಾಗಬೇಕು ಮತ್ತು ಮಾನಸಿಕ ಸಮಸ್ಯೆಗಳನ್ನು ಕೂಡ ನಮ್ಮ ಆರೋಗ್ಯದ ಒಂದು ಭಾಗವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.
ಮನೋವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ರೂಪಿಸಿದ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು.
ನೈಸರ್ಗಿಕ ವಿಕೋಪಗಳು, ತುರ್ತು ಪರಿಸ್ಥಿತಿ ಎದುರಿಸಲು ಸ್ವಯಂಸೇವಕರಿಗೆ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ
ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್, ಕಾರ್ಯಕ್ರಮ ಸಂಯೋಜಕಿ ಪದ್ಮಶ್ರೀ ಕೆ., ಸಹಾಯಕ ಪ್ರಾಧ್ಯಾಪಕ ಸುಧೀರ್ ಕೆ ವಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಪಾಟೀಲ್ ದಿವ್ಯಲಕ್ಷ್ಮಿ ಹಾಗೂ ಪೂರ್ಣಚಂದ್ರ ಮತ್ತಿತರರು ಉಪಸ್ಥಿತರಿದ್ದರು.