ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

School Holidays: ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ: ಎಷ್ಟು ದಿನ? ಇಲ್ಲಿದೆ ಮಾಹಿತಿ

Dasara Holidays: 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರ ವರೆಗೆ ಇರಲಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಒಟ್ಟು 18 ದಿನ ಇರಲಿದೆ. ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ಇರುವುದರಿಂದ ಶಾಲೆಗೆ ಹಾಜರಾಗಬೇಕಾಗುತ್ತದೆ.

ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ (Dasara holidays) ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ (School Holidays) ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ. ದಸರಾ ರಜೆ ಇದ್ದರೂ ಅಕ್ಟೋಬರ್ 2ರಂದು ಶಾಲೆ ತೆರೆಯಲು ಸೂಚಿಸಲಾಗಿದೆ. ಈ ದಿನ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಇರುವ ಕಾರಣ ಕಡ್ಡಾಯವಾಗಿ ಮಕ್ಕಳು ಶಾಲೆಗೆ ಹಾಜರಾಗುಂತೆ ಹಾಗೆ ಶಿಕ್ಷಕರು ಶಾಲೆಯಲ್ಲಿ ಈ ದಿನ ಆಚರಿಸುವಂತೆ ಸೂಚಿಸಲಾಗಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಹಾಗೆ ಮಳೆಯ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಅತ್ಯಧಿಕ ರಜೆ ನೀಡಲಾಗಿದೆ. ಕೆಲವು ಕಡೆ ಬರೋಬ್ಬರಿ 10ಕ್ಕೂ ಹೆಚ್ಚು ದಿನ ಮಳೆ ಕಾರಣದಿಂದ ರಜೆ ನೀಡಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಕೂಡ ಕಡಿಮೆಯಾಗಿವೆ.

ಅಕ್ಟೋಬರ್‌ನಲ್ಲಿ ಸಾಲು ಸಾಲು ರಜೆಗಳಿವೆ, ಅದ್ರಲ್ಲೂ ವಾಲ್ಮೀಕಿ ಜಯಂತಿ 7ರಂದು ರಜೆ ಇದೆ. ಇದಾದ ಬಳಿಕ ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್‌ 22 ಕ್ಕೆ ಬಲಿಪಾಡ್ಯ ಸಾರ್ವಜನಿಕ ರಜೆ ಇದೆ. ಅಕ್ಟೋಬರ್‌ನಲ್ಲಿ ಸತತ ರಜೆಗಳಿವೆ.

ಇದನ್ನೂ ಓದಿ: Viral News: ಸರ್ಕಾರಿ ನೌಕರರಿಗೆ ಇಲ್ಲಿದೆ ಗುಡ್‍ನ್ಯೂಸ್: ಪೋಷಕರೊಂದಿಗೆ ಸಮಯ ಕಳೆಯಲು ಸಿಗಲಿದೆ ವಿಶೇಷ ರಜೆ!

ಹರೀಶ್‌ ಕೇರ

View all posts by this author