ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dasara sports meet 2025: ಕುಸ್ತಿಪಟು ವಿನೇಶಾ ಫೋಗಟ್ ಅತಿಥಿ

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದ ಅವರು ನಿಗದಿಗಿಂತ ಕೊಂಚ ಹೆಚ್ಚು ದೇಹತೂಕದ ಕಾರಣಕ್ಕೆ ಟೂರ್ನಿಯಿಂದ ಹೊರಬಿದ್ದು, ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು. ನಿವೃತ್ತಿ ಬಳಿಕ ರಾಜಕೀಯ ಪ್ರವೇಶಿಸಿರುವ ಅವರು, 2024ರ ಅಕ್ಟೋಬರ್‌ನಲ್ಲಿ ಹರಿಯಾಣದ ಜುಲಾನ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.

ದಸರಾ ಕ್ರೀಡಾಕೂಟ: ಕುಸ್ತಿಪಟು ವಿನೇಶ್ ಫೋಗಟ್ ವಿಶೇಷ ಅತಿಥಿ

-

Abhilash BC Abhilash BC Sep 21, 2025 12:11 PM

ಮೈಸೂರು: ದಸರಾ ಕ್ರೀಡಾಕೂಟ 2025ರ(Dasara sports meet 2025) ಉದ್ಘಾಟನಾ ಸಮಾರಂಭ ಸೆ. 22ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಒಲಿಂಪಿಯನ್‌ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೆ. 22ರಿಂದ 25ರವರೆಗೆ ನಡೆಯಲಿದೆ.

ಮೂರು ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ವಿನೇಶ್ ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯಿಯನ್ ಪಂದ್ಯಗಳಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಹೊಂದಿದ್ದಾರೆ. ಫೆೆಬ್ರವರಿ 18, 2019 ರಂದು ನಡೆದ ಲಾರೆನ್ಸ್ ವರ್ಲ್ಡ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದ ಅವರು ನಿಗದಿಗಿಂತ ಕೊಂಚ ಹೆಚ್ಚು ದೇಹತೂಕದ ಕಾರಣಕ್ಕೆ ಟೂರ್ನಿಯಿಂದ ಹೊರಬಿದ್ದು, ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು. ನಿವೃತ್ತಿ ಬಳಿಕ ರಾಜಕೀಯ ಪ್ರವೇಶಿಸಿರುವ ಅವರು, 2024ರ ಅಕ್ಟೋಬರ್‌ನಲ್ಲಿ ಹರಿಯಾಣದ ಜುಲಾನ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ CM Siddaramaiah: ದಸರಾ ಧಾರ್ಮಿಕ ವಿಚಾರವಲ್ಲ, ಸಾಂಸ್ಕೃತಿಕ ಹಬ್ಬ: ಸಿಎಂ ಸಿದ್ದರಾಮಯ್ಯ