ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಯುತ್ತಿದೆ, ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

Congress MLA: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಒಂದು ಸರ್ಕಾರ ಮಾಡುವ ಕೆಲಸವನ್ನು ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ

ಶಿವಗಂಗಾ ಬಸವರಾಜ್

ಹರೀಶ್‌ ಕೇರ ಹರೀಶ್‌ ಕೇರ Aug 10, 2025 1:51 PM

ದಾವಣಗೆರೆ: ಧರ್ಮಸ್ಥಳದ ಅರಣ್ಯದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಪಿತೂರಿ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ (Congress MLA Shivaganga Basavaraj) ಒತ್ತಾಯಿಸಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಜನಪರ ಕೆಲಸ ಮಾಡುತ್ತ ಬಂದಿದ್ದಾರೆ. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

ಹೆಗ್ಗಡೆಯವರು ಒಂದು ಸರ್ಕಾರ ಮಾಡುವ ಕೆಲಸವನ್ನು ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ರೈತರಿಗೆ, ಬಡವರಿಗೆ, ಮಹಿಳೆಯರಿಗೆ ನೆರವಾಗುವ ಕಾರ್ಯಕ್ರಮಗಳು. ಆದರೆ ಇಂದಿನ ವ್ಯವಸ್ಥೆಯಲ್ಲಿ ಇದು ದುಃಖಕರ ವಿಷಯ. ಯಾರ್ಯಾರು ಆರೋಪ ಮಾಡಿದರೋ ಆ ಬಗ್ಗೆ ಎಸ್‌ಐಟಿ ತನಿಖೆ ನಡೀತಿದೆ. ಆದರೆ ಆರೋಪ ಮಾಡುವವರಿಗೆ ಇಂತಹ ಮನಸ್ಥಿತಿ ಏಕೆ ಬಂತು ಗೊತ್ತಿಲ್ಲ ಎಂದರು.

ಹೆಣ್ಣುಮಕ್ಕಳು ಸ್ವಾವಲಂಬನೆಯಿಂದ ನೆಮ್ಮದಿ ಬದುಕು ಕಟ್ಟಿಕೊಳ್ಳಬೇಕು ಎಂಬ ಧ್ಯೇಯ ಇಟ್ಟುಕೊಂಡವರು ವೀರೇಂದ್ರ ಹೆಗ್ಗಡೆ. ಅವರ ಮನೆಯೊಳಗೆ ಈ ರೀತಿ ನಡೆಯುತ್ತೆ ಅಂದ್ರೆ ನಮಗೂ ನಂಬಕ್ಕಾಗಲ್ಲ. ಆದರೂ ಸಹ ಎಸ್ಐಟಿ ತನಿಖೆ ನಡೆಯುತ್ತಿದೆ. ಆರೋಪ ಮಾಡಿದವರು ತೋರಿಸಿದ ಜಾಗದಲ್ಲಿ ಏನೂ ಸಿಕ್ಕಿಲ್ಲ. ಯಾವುದೇ ಶವ ಆಗಲಿ, ಅವಶೇಷವಾಗಲಿ ಸಿಕ್ಕಿಲ್ಲ. ಇದರ ಹಿಂದೆ ಏನೋ ಪಿತೂರಿ ಇದೆ ಎಂದು ಗೊತ್ತಾಗುತ್ತಿದೆ. ದಯಮಾಡಿ ಸರ್ಕಾರ ಈ ಬಗ್ಗೆ ಪರಿಶೀಲನೆ ಮಾಡಬೇಕು. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

ಇದನ್ನೂ ಓದಿ: Dharmasthala Case: ಧರ್ಮಸ್ಥಳದ ಬಗ್ಗೆ ಬಿಜೆಪಿ ಮುಖಂಡ ಬಿಎಲ್‌ ಸಂತೋಷ್‌ ಕುತೂಹಲಕಾರಿ ಪೋಸ್ಟ್‌