ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Davanagere news: ರಾಜ್ಯಕ್ಕೂ ಕಾಲಿಟ್ಟ ʼಐ ಲವ್ ಮೊಹಮ್ಮದ್ʼ ಗಲಾಟೆ, ದಾವಣಗೆರೆ ಉದ್ವಿಗ್ನ

I Love Muhammad: ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯೊಂದರ ಮುಂದೆ ʼಐ ಲವ್‌ ಮೊಹಮ್ಮದ್‌ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ.

ದಾವಣಗೆರೆ : ʼಐ ಲವ್ ಮೊಹಮ್ಮದ್ʼ ಪ್ಲೆಕ್ಸ್‌ಗಳ (I love Muhammad) ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಇದರ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ (Davanagere news) ನಡೆದಿದೆ. ಈ ಪೋಸ್ಟರ್‌ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್‌ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯೊಂದರ ಮುಂದೆ ʼಐ ಲವ್‌ ಮೊಹಮ್ಮದ್‌ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ. ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಒಂದು ಸಮುದಾಯದ 500-600 ಜನ ಬಂದು ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಕಮಕಿ ಆಗಿದ್ದು, ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಐ ಲವ್ ಮೊಹಮ್ಮದ್’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಬರೇಲಿಯಲ್ಲಿ ಉರುಸ್ ಯಾತ್ರೆ ವೇಳೆ ‘ಐ ಲವ್ ಮೊಹಮ್ಮದ್’ ಎಂಬ ಪೋಸ್ಟರ್‌ ಹಿಡಿದು ಮೆರವಣಿಗೆ ಸಾಗಿದ್ದರು. ಇದು ಒಂದು ಟ್ರೆಂಡ್‌ ಆಗಿದ್ದು, ನಂತರ ಹಿಂದೂಗಳನ್ನು ಕೆರಳಿಸಲು ಕೆಲವು ಮುಸ್ಲಿಂ ಕಿಡಿಗೇಡಿಗಳು ಇದನ್ನು ಒಂದು ಅಭಿಯಾನವಾಗಿ ಶುರುಹಚ್ಚಿಕೊಂಡಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿ ಹಿಂದೂಗಳು ‘ಐ ಲವ್ ಮಹಾದೇವ್’ ಎಂಬ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಈ ವಿವಾದ ಹಲವು ರಾಜ್ಯಗಳಿಗೆ ಹಬ್ಬಿದೆ.

ಇದನ್ನೂ ಓದಿ: Stone Pleting: ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ಹರೀಶ್‌ ಕೇರ

View all posts by this author