Self Harming: ಪತ್ನಿಯ ಅಕಾಲಿಕ ಸಾವಿನ ನೋವು; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ
Davanagere News: ಪತ್ನಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಉದಯ್ (35) ಈ ಕೃತ್ಯ ಎಸಗಿದಾತ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಮೃತರು.

ಸಾಂದರ್ಭಿಕ ಚಿತ್ರ.

ದಾವಣಗೆರೆ: ಪತ್ನಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ (Self Harming). ಇಲ್ಲಿನ ಎಸ್‌ಪಿಎಸ್ ನಗರದ ಉದಯ್ (35) ಈ ಕೃತ್ಯ ಎಸಗಿದಾತ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3)ನನ್ನು ಕೊಲೆಗೈದು ಬಳಿಕ ಉದಯ್ ಗುರುವಾರ (ಏ. 10) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ (Davanagere News). ಕೆಲ ತಿಂಗಳ ಹಿಂದೆ ಅಷ್ಟೇ ಉದಯ್ ಪತ್ನಿ ಹೇಮಾ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಪತ್ನಿ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಉದಯ್ ಮಕ್ಕಳನ್ನು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ನೇಣಿಗೆ ಶರಣಾಗುವ ಮೊದಲು ಉದಯ್ ರಕ್ತದಲ್ಲಿ ʼಐ ಲವ್ ಯು ಹೇಮಾʼ ಎಂದು ಗೋಡೆ ಮೇಲೆ ಬರೆದಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರೀತಿಸಿ ಮದುವೆಯಾಗಿದ್ದ ಜೋಡಿ
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ನಿವಾಸಿ ಹೇಮಾ ಹಾಗೂ ಉದಯ್ ಪರಸ್ಪರ ಪ್ರೀತಿಸಿ ಕೆಲವು ವರ್ಷಗಳ ಹಿಂದೆ ಮದುವೆ ಆಗಿದ್ದರು. 8 ತಿಂಗಳ ಹಿಂದೆ ಹೇಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಉದಯ್ ಇದೇ ನೋವಿನಲ್ಲಿ ಕೊರಗುತ್ತಿದ್ದ ಎನ್ನಲಾಗಿದೆ. ಕೊನೆಗೆ ನೋವು ಕಡೆದುಕೊಳ್ಳಲಾಗದೆ ಸಾವಿನ ತೀರ್ಮಾನ ಕೈಗೊಂಡಿದ್ದಾನೆ.
ಉದಯ್ ತೀರ್ಮಾನಕ್ಕೇನು ಕಾರಣ?
ತಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂದು ಚಿಂತಿಸಿ ಉದಯ್ ಅವರನ್ನೂ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಕ್ಕಳನ್ನು ಉಸಿರುಗಟ್ಟಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ: Self Harming: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ, ಅಕ್ರಮ ಸಂಬಂಧ ಹೊಂದಿದ್ದ ಪತಿಯತ್ತ ಸಂಶಯ
ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ನಾಲ್ವರು ಆತ್ಮಹತ್ಯೆ
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ನಿರಾಶೆಯಿಂದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ. ಈ ನಾಲ್ವರೂ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ, ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಆತ್ಮಹತ್ಯೆ ಮಾಡಿಕೊಂಡವರು.
ಈ ದುರ್ಘಟನೆಗಳಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಫೇಲ್ ಆಗಿದ್ದಕ್ಕೆ ಮನನೊಂದ ಇವರು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.