ದಾವಣೆಗೆರೆ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯ ಪ್ರತಿಭಾನ್ವಿತ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಜಿಮ್ ಮುಗಿಸಿ ಮನೆಗೆ ಬರ್ತಿದ್ದ ವೇಳೆ ಸುಶೀಲ್ ಕುಮಾರ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಬಾಡಿ ಬಿಲ್ಡಿಂಗ್ನಲ್ಲಿ (Body Builder) ಸುಶೀಲ್ ಪ್ರಶಸ್ತಿಗಳಿಸಿದ್ದಾರೆ.
ಜಿಮ್ ಮುಗಿಸಿ ಮನೆಗೆ ಬಂದ ಸುನೀಲ್ ಕೆಲವೇ ಕ್ಷಣಗಳಲ್ಲಿ ಸುಶೀಲ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 26 ವರ್ಷದ ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಮುಟ್ಟಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯದ ಕೀರ್ತಿ ಪಾತಾಕೆ ಹಾರಿಸಿದ್ದ ಪ್ರತಿಭಾನ್ವಿತ ಸುಶೀಲ್ ಸಾವಿನಿಂದ ಇಡೀ ಗ್ರಾಮ ಶೋಕದಲ್ಲಿ ಮುಳುಗಿದೆ. ಮೃತ ಸುಶೀಲ್ ಕುಮಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.
ಇತ್ತೀಚಿನ ದಿನದಲ್ಲಿ ಯುವಕರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ಜಿಮ್ ಮಾಡುವಾಗ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ವ್ಯಾಯಾಮ ಮಾಡುವಾಗ ಎದೆನೋವು, ಉಸಿರಾಟದ ತೊಂದರೆ, ತಲೆಸುತ್ತು, ಅಥವಾ ಎದೆಭಾರ ಎನಿಸಿದರೆ ತಕ್ಷಣವೇ ವ್ಯಾಯಾಮ ನಿಲ್ಲಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
6 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ಕರೂರು ಹೋಬಳಿಯ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪ್ರೀತಿಯ ಪುತ್ರ ತ್ರಿಲೋಕ್ ಜೈನ್ (6) ಮೃತಪಟ್ಟ ದುರ್ದೈವಿ ಬಾಲಕ. ಶನಿವಾರ ಎಂದಿನಂತೆ ಶಾಲೆಗೆ ಬಂದಿದ್ದ ತ್ರಿಲೋಕ್, ಮಧ್ಯಾಹ್ನ ಶಾಲಾ ಅವಧಿ ಮುಗಿಯುವ ಸಮಯದಲ್ಲಿ ಸಹಪಾಠಿಗಳೊಂದಿಗೆ ಆವರಣದಲ್ಲಿ ಇದ್ದಾಗ ಏಕಾಏಕಿ ನೆಲಕ್ಕೆ ಕುಸಿದು ಬಿದ್ದಿದ್ದಾನೆ.
ಶಿವಮೊಗ್ಗದಲ್ಲಿ ಘೋರ ಘಟನೆ; ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ಬಾಲಕ ಸಾವು
ಶಾಲಾ ಸಿಬ್ಬಂದಿ ತಕ್ಷಣವೇ ಬಾಲಕನನ್ನು ಉಪಚರಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಬಾಲಕ ಅಷ್ಟರಲ್ಲಿಯೇ ಮೃತಪಟ್ಟಿದ್ದ. ಮಗನ ಸಾವಿನ ಸುದ್ದಿ ಕೇಳಿ ಇಡೀ ಕುಟುಂಬ ಆಘಾತಕ್ಕೆ ಒಳಗಾಗಿದ್ದು, ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.