ಖಾಸಗಿ ಬಸ್ ಏಜೆಂಟ್ ಚಾಕುವಿನಿಂದ ಹತ್ಯೆ
ಖಾಸಗಿ ಬಸ್ ಏಜೆಂಟ್ ಚಾಕುವಿನಿಂದ ಹತ್ಯೆ
Vishwavani News
June 21, 2022
ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ. ನಲ್ಲೂರಿನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಸಲೀಂ ಎಂಬಾತ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಆರೋಪಿ ಚನ್ನಗಿರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾನೆ. ಜಾಕೀರ್ ಆಗಮಿಸು ತ್ತಿದ್ದಂತೆ ಬೈಕ್ ನಲ್ಲಿ ಬಂದ ಸಲೀಂ ಏಕಾಏಕಿ ಯಾಗಿ ಜಾಕೀರ್ ಗೆ ಚಾಕುವಿನಿಂದ ಚುಚ್ಚಿದ್ದಾನೆ. ರಕ್ತಸಿಕ್ತವಾಗಿ ಬಿದ್ದ ಬಳಿಕವೂ ಚುಚ್ಚಿ ಕೊಲೆ ಮಾಡಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ ಅನೈತಿಕ ಸಂಬಂಧ ಅಥವಾ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.