CM Siddaramaiah: 60% ಕಮಿಷನ್ ಆರೋಪ; ವಿರೋಧ ಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು ಎಂದ ಸಿಎಂ

CM Siddaramaiah: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

image-c76a328a-ca7d-45ff-803f-a3f15e5db39b.jpg
Profile Prabhakara R January 5, 2025
ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ನಗರದ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ‌, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು. ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು. ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ಧಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ರಾಜಕೀಯ ಚರ್ಚೆ ನಡೆದಿಲ್ಲಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಊಟಕ್ಕೆ ಸೇರುವುದು ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಮಾರ್ಚ್‌ನಲ್ಲಿ ಬಜೆಟ್ ಮಂಡನೆಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು. ಈ ಸುದ್ದಿಯನ್ನೂ ಓದಿ | Chitra santhe: ಕಲಾಕೃತಿ ಕೊಂಡು ಕಲಾವಿದರನ್ನು ಬೆಂಬಲಿಸಿ: ಸಿಎಂ ಸಿದ್ದರಾಮಯ್ಯ ಕರೆ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ