ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Davanagere South By-Election Results: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು

Karnataka Bypoll Results 2026: ದಾವಣಗೆರೆಯಲ್ಲಿ ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಪಕ್ಷದಲ್ಲಿ ಉಂಟಾದ ಭಿನ್ನಮತದ ನಡುವೆಯೂ ಕೈ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಗೆಲುವು

ದಾವಣಗೆರೆ ದಕ್ಷಿಣ ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಮತ್ತು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ. -

Prabhakara R
Prabhakara R May 4, 2026 2:45 PM

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By-Election Results) ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವಿನ ನಗೆ ಬೀರಿದ್ದಾರೆ. ನಗರದ ಡಿಆರ್‌ಆರ್‌ ಕಾಲೇಜಿನಲ್ಲಿ ಸೋಮವಾರ ಮತ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ದಾಸ ಕರಿಯಪ್ಪ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರು 4,900 ಸಾವಿರ ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

ದಾವಣಗೆರೆಯಲ್ಲಿ ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ, ನಾನಾ ಕಸರತ್ತು ನಡೆಸಿ ಮೊಮ್ಮಗ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ಪಡೆಯಲು ಕುಟುಂಬ ಯಶಸ್ವಿಯಾಗಿತ್ತು. ಇದರಿಂದ ಸ್ಥಳೀಯ ಮುಸ್ಲಿಂ ಮುಖಂಡರು ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಿನ್ನಮತ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಮನ್ನೊಂದೆಡೆ ಈ ಕ್ಷೇತ್ರ ಹುಟ್ಟಿದಾಗಿನಿಂದ ಖಾತೆಯನ್ನೇ ತೆರೆಯದ ಬಿಜೆಪಿ, ಸಾಮಾನ್ಯ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯಕ್ಕೆ ಸೇರಿದ ಸಾಮಾನ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಪ್ರಯೋಗಕ್ಕೆ ಇಳಿದಿತ್ತು. ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟು ಕೋಟೆಯಲ್ಲಿ ಕಮಲ ಅರಳಿಸಲು ನಡೆಸಿದ ಪ್ರಯೋಗ ವಿಫಲವಾಗಿದೆ.