ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ: ಡಿ.ಕೆ. ಶಿವಕುಮಾರ್

DK Shivakumar: ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ಬಹಳ ಸಂತೋಷ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು, ರಾಜು ಅವರು ಡಿಕೆ ಕಮ್ ಬ್ಯಾಕ್ ಎಂದು ಕರೆದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನೂರು ಜನ ಕಿರುಚಾಡಬಹುದು. ಈ ನೂರು ಜನರಿಗೆ ಜಗ್ಗುವ ಮಗ ಡಿ.ಕೆ. ಶಿವಕುಮಾರ್ ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಂತ ಸೇವಾಲಾಲ್ ಜಯಂತೋತ್ಸವಕ್ಕೆ ಚಾಲನೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ದಾವಣಗೆರೆ, ಫೆ.14: ಬಂಜಾರ ಸಮುದಾಯಕ್ಕೆ ಅನ್ಯಾಯವಾದಾಗ ಇವರ ಪರ ನಿಂತು ಹೋರಾಟ ಮಾಡಿದ್ದು ಈ ಡಿ.ಕೆ. ಶಿವಕುಮಾರ್. ಕೆ.ಟಿ ರಾಥೋಡ್ ಅವರ ಕಾಲದಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿಸಿ, ತಾಂಡ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಮ್ಮ ಬದುಕಿಗೆ ಹೊಸ ರೂಪ ನೀಡಿದ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂಬ ಇತಿಹಾಸ ಮರೆಯಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮಿತಿ ತಾಲೂಕಿನ ಭಾಯಗಡ್- ಸೊರಗೊಂಡನಕೊಪ್ಪದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ್ ಅವರ 287ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ

ನಾವು ಇಂದು ಸಂತ ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ. ಸತ್ಯ, ನಿಷ್ಠೆ, ಸಾಮಾಜಿಕ ನ್ಯಾಯ, ಸಾಮರಸ್ಯ, ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ ಸಂತ ಸೇವಾಲಾಲರು. ಮನುಷ್ಯನಿಗೆ ಧರ್ಮ ಬೇಕು, ಧರ್ಮಕ್ಕೆ ದಯೆ ಬೇಕು. ಈ ಸಂದರ್ಭದಲ್ಲಿ ದಯವಿಲ್ಲದ ಧರ್ಮವಾವುದಯ್ಯಾ?, ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಎಂಬ ಬಸವಣ್ಣನವರ ವಚನ ಸ್ಮರಿಸಬೇಕು. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡು ನಾವು ಬದುಕುತ್ತಿದ್ದೇವೆ ಎಂದರು.

DKS

ನಾವು ಹುಟ್ಟುವಾಗ ಯಾವ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಮ್ಮ ಗುರುಗಳು ಹೇಳಿದ್ದಾರೆ. ಸೇವಾಲಾಲ್ ಅವರಂತಹ ಸಮಾಜ ಸುಧಾರಕರು, ಕಾಲಜ್ಞಾನಿಯಾಗಿದ್ದ ಮಹಾಪುರುಷರು ಇದ್ದ ರಾಜ್ಯವಿದು ಎಂದು ಹೇಳಿಕೊಳ್ಳಲು ಬಹಳ ಸಂತೋಷವಾಗುತ್ತದೆ ಎಂದು ಹೇಳಿದರು.

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ಈ ಡಿ.ಕೆ. ಶಿವಕುಮಾರ್ ಅಲ್ಲ

ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ಬಹಳ ಸಂತೋಷ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು, ರಾಜು ಅವರು ಡಿಕೆ ಕಮ್ ಬ್ಯಾಕ್ ಎಂದು ಕರೆದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನೂರು ಜನ ಕಿರುಚಾಡಬಹುದು. ಈ ನೂರು ಜನರಿಗೆ ಜಗ್ಗುವ ಮಗ ಡಿ.ಕೆ. ಶಿವಕುಮಾರ್ ಅಲ್ಲ. ಇಲ್ಲಿರುವ ಸಾವಿರಾರು ಜನ, ನನ್ನ ತತ್ವ, ನಿಷ್ಠೆ, ಸಿದ್ಧಾಂತ ತಿಳಿದಿದ್ದಾರೆ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದರು.

ಗೋಬ್ಯಾಕ್ ಎನ್ನುವವರಿಗಿಂತ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಾಗಿದ್ದಾರೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಹೋರಾಟ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಯಾರೇ ಗೋಬ್ಯಾಕ್ ಎಂದರೂ ಈ ಡಿ.ಕೆ. ಶಿವಕುಮಾರ್ ಜಗ್ಗುವ ಮಗ ಅಲ್ಲ. ಈ ವಿಚಾರ ರಾಜು ಅವರಿಗೂ ಗೊತ್ತಿದೆ. ನಾನು, ವೈದ್ಯ ಅವರು, ಬೋಸರಾಜು ಅವರು, ರುದ್ರಪ್ಪ ಲಮಾಣಿ ಅವರು, ಸಂಸದರು, ಗಣ್ಯರು ನಿಮ್ಮ ಜತೆಯಲ್ಲಿದ್ದೇವೆ. ನಿಮ್ಮ ಬದುಕಿನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಚುನಾವಣೆ ಇದ್ದಾಗ ರಾಜಕಾರಣ ಮಾಡೋಣ. ಗೋಬ್ಯಾಕ್ ಎನ್ನುವವರಿಗಿಂತ ಕಮ್ ಬ್ಯಾಕ್ ಎನ್ನುವ ಜನ ಹೆಚ್ಚಾಗಿದ್ದಾರೆ ಎಂದು ತಿಳಿಸಿದರು.

ಬಂಜಾರ ಸಮುದಾಯ ಜನರು ಒಳ್ಳೆಯವರು

ಕಾರ್ಯಕ್ರಮದ ಬಳಿಕ ಮಾಧ್ಯಮಗಳು ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ, ʼಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡಿಸಿದೆ. ಒಳಮೀಸಲಾತಿ ವಿಚಾರದಲ್ಲಿ 6-6-5 ಸೂತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಒಂದು ನೂರು ಜನರ ಕೈಯಲ್ಲಿ ಈ ರೀತಿಯ ಕೆಲಸ ಮಾಡಿಸುತ್ತಿದ್ದಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು‌.

ನೂರು ಜನಕ್ಕೆಲ್ಲಾ ರಾಜಕಾರಣದಲ್ಲಿ ಹೆದರಿಕೊಳ್ಳಲು ಆಗುತ್ತದೆಯೇ? ಈ ರೀತಿ ಮಾಡುತ್ತಾರೆ ಎಂದು ಇಲ್ಲಿಗೆ ಬರುವಾಗಲೇ ತಿಳಿದಿತ್ತು. ಲಂಬಾಣಿ ಸಮುದಾಯದ ಶೇ‌.90ರಷ್ಟು ಜನರು ಒಳ್ಳೆಯವರು. ಈ ರೀತಿಯ 10 ಪರ್ಸೆಂಟ್ ಜನ ಇರುತ್ತಾರೆ. ಅವರಿಗೆ ರಾಜಕಾರಣ ಮುಖ್ಯ. ಅವರುಗಳು ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ನಾವು ಈ ಸಮುದಾಯದ ಬದುಕಿನ ಏಳಿಗೆಗಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಬಂಜಾರ ಸಮುದಾಯಕ್ಕೆ ಎಸ್.ಸಿ ಸ್ಥಾನಮಾನ, ಅಭಿವೃದ್ಧಿ ನಿಗಮ ಮಾಡಿದ್ದು ಕಾಂಗ್ರೆಸ್ ಪಕ್ಷ. ತಾಂಡಾಗಳಿಗೆ ಹಕ್ಕು ಪತ್ರ ನೀಡಿದ್ದು ನಾವು. ಒಳ್ಳೆಯ ಜನರ ಪರವಾಗಿ ನಾವು ಎಂದಿಗೂ ಇರುತ್ತೇವೆ ಎಂದರು.

ʼʼತಾಳ್ಮೆ ಕೂಡ ಸಾಕಷ್ಟು ಫಲ ನೀಡುತ್ತದೆʼʼ: ಅಧಿಕಾರ ಹಂಚಿಕೆಯ ಸೂಚನೆ ನೀಡಿದ್ರಾ ಡಿ.ಕೆ. ಶಿವಕುಮಾರ್‌?

ದೆಹಲಿ ಭೇಟಿ ಫಲಪ್ರದವಾಯಿತೇ ಎಂದು ಕೇಳಿದಾಗ, "ಕಾಲ ಉತ್ತರ ನೀಡುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.