ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Body Found: ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ಹಾಗೂ ಮಗಳು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ಮಾಜಿ ಕಾರ್ಪೊರೇಟರ್‌ ಚಂದ್ರಶೇಖರ್ -

ಹರೀಶ್‌ ಕೇರ
ಹರೀಶ್‌ ಕೇರ Jan 11, 2026 11:46 AM

ದಾವಣಗೆರೆ, ಜ.11: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ‌ ಮಾಜಿ ಕಾರ್ಪೊರೇಟರ್ (Former BJP Corporator)​ ಶವ ಪತ್ತೆಯಾಗಿದೆ. ಇದು ದಾವಣಗೆರೆಯ‌ (Davanagere news) 43ನೇ ವಾರ್ಡ್ ಮಾಜಿ ಕಾರ್ಪೊರೇಟರ್ ಸಂಕೋಳ್ ಚಂದ್ರಶೇಖರ್ (Sankol Chandrasekhar)​ ಮೃತ ದೇಹ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಅತ್ತ ಮಾಜಿ ಕಾರ್ಪೊರೇಟರ್​ನ ಇಬ್ಬರು ಮಕ್ಕಳು ಆತ್ಮಹತ್ಯೆಗೆ (Self harming) ಯತ್ನಿಸಿರುವ ಘಟನೆ ಕೂಡ ನಡೆದಿದೆ.

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ನರೇಶ್ (20) ಹಾಗೂ ಮಗಳು ಪವಿತ್ರಾ (23) ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಕ್ಕಳ ಜೊತೆ ಜಗಳವೇ ಕಾರಣ?

ಸಾಲ ಮಾಡಿಕೊಂಡಿದ್ದ ವಿಚಾರವಾಗಿ ಮನೆಯಲ್ಲಿ ಮಕ್ಕಳ ಜೊತೆಗೆ ಚಂದರಶೇಖರ್‌ ಜಗಳ ನಡೆದಿದೆ ಎನ್ನಲಾಗುತ್ತಿದೆ. ನಿನ್ನೆ ರಾತ್ರಿ ಮನೆಯಲ್ಲಿ ಮಾಜಿ ಕಾರ್ಪೊರೇಟರ್ ಸಂಕೋಳ್ ಚಂದ್ರಶೇಖರ ಹಾಗೂ ಮಕ್ಕಳ ಜೊತೆಗೆ ವಾಗ್ವಾದ ನಡೆದಿದ್ದು, ಬಳಿಕ ಅವರು ನಾಗನೂರು ಹೊರವಲಯದ ತೋಟಕ್ಕೆ ಬಂದು ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

Road Accident: ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಕೂಡ ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ಬಳಿಕ ಸತ್ಯಾ ಸತ್ಯತೆ ಹೊರಬರಲಿದೆ.