Davanagere News: ದಾವಣಗೆರೆ ಬಳಿ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು
Davanagere News: ಶಾಲೆಗೆ ರಜೆ ಇದ್ದಿದ್ದರಿಂದ ಈಜಾಡಲು ಬಾಲಕರು ಕೆರೆಗೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಾಯಕೊಂಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಕೆರೆಗೆ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ (Davanagere News) ತಾಲೂಕಿನ ಕುರ್ಕಿ ಗ್ರಾಮದ ಬಳಿ ನಡೆದಿದೆ. ದಾವಣಗೆರೆಯ ಗುರುಕುಲ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾನುವಾರ ರಜೆ ಇದ್ದ ಹಿನ್ನೆಲೆ ಈಜಾಡಲು ಕೆರೆಗೆ ಹೋಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಮೃತರನ್ನು ಯತೀಂದ್ರ(16) ಮತ್ತು ಪಾಂಡು(16) ಎಂಬುದಾಗಿ ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ತುರ್ಚಘಟ್ಟದ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಆಗಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ಈಜಾಡಲು ತೆರಳಿದ್ದರು. ಮೃತ ವಿದ್ಯಾರ್ಥಿಗಳಲ್ಲಿ ಒಬ್ಬರ ಶವ ದೊರೆತಿದೆ. ಇನ್ನೊಬ್ಬನ ಶವಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ಮುಂದುವರಿಸಿದ್ದಾರೆ. ಈ ಸಂಬಂಧ ಮಾಯಕೊಂಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Road Accident: ಬೈಕ್ ಸ್ಟಂಟರ್‌ಗಳ ಹಾವಳಿ; ಕಾರು ಪಲ್ಟಿಯಾಗಿ ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳ ದುರ್ಮರಣ
ಬಾಗಲಕೋಟೆಯಲ್ಲಿ ಭೀಕರ ಸರಣಿ ಅಪಘಾತ; ಮೂವರ ದುರ್ಮರಣ
ಬಾಗಲಕೋಟೆ: ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದ ಸರಣಿ ಅಪಘಾತದಲ್ಲಿ (Road Accident) ಮೂವರು ದುರ್ಮರಣ ಹೊಂದಿದ್ದಾರೆ. ಟಾಟಾ ಏಸ್, ಕಾರು ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ನಡೆದಿದೆ.
ಕಾರಿನಲ್ಲಿದ್ದ ಜಮಖಂಡಿ ತಾಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ(26),
ಟಾಟಾ ಏಸ್‌ನಲ್ಲಿದ್ದ ಗೋಕಾಕ್ ತಾಲೂಕಿನ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ(42) ಹಾಗೂ ಬೈಕ್‌ನಲ್ಲಿದ್ದ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಮಹಾಂತೇಶ್ ಹೊನ್ನಾಕಟ್ಟೆ(35) ಮೃತರು. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಮಖಂಡಿಯಿಂದ ವಿಜಯಪುರಕ್ಕೆ ಹೊರಟಿದ್ದ ಟಾಟಾ ಏಸ್ ವಾಹನ, ವಿಜಯಪುರದಿಂದ ಜಮಖಂಡಿಗೆ ಬರುತ್ತಿದ್ದ ಕಾರು ನಡುವೆ ಅಪಘಾತ ನಡೆದಿದ್ದು, ಈ ವೇಳೆ ಟಾಟಾ ಏಸ್ ವಾಹನದ ಹಿಂಬದಿಯಿದ್ದ ಎರಡೂ ಬೈಕಗಳು ಡಿಕ್ಕಿಯಾಗಿವೆ. ಇದರಿಂದ ಮೂವರು ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ | Viral Video: ಕುಡಿದ ಮತ್ತಿನಲ್ಲಿ ಮೊಬೈಲ್ ಟವರ್ ಏರಿದ ಭೂಪ ; ಯುವಕನ ಹುಚ್ಚಾಟಕ್ಕೆ ನೆಟ್ಟಿಗರು ಗರಂ
ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ , ಪಿ.ಎಸ್.ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.