ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Self Harming: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ; ಪತಿ, ಮದುವೆ ಮಾಡಿಸಿದವನೂ ಆತ್ಮಹತ್ಯೆ

ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಡೆತ್‌ನೋಟ್‌ ಬರೆದಿಟ್ಟು ಪತಿ ಹರೀಶ್‌ ಆರೋಪಿಸಿದ್ದಾರೆ. ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಯುವತಿಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.‌

ಮೃತ ಹರೀಶ್‌

ದಾವಣಗೆರೆ, ಜ.27: ಮದುವೆಯಾದ (Marriage) ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ (Wife) ಪರಾರಿಯಾಗಿದ್ದಕ್ಕೆ ಪತಿ (Husband) ಮನನೊಂದು ನೇಣಿಗೆ ಶರಣಾದ (Self Harming) ಘಟನೆ ದಾವಣಗೆರೆ (Davanagere) ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಇವರ ಮದುವೆ ಮಾಡಿಸಿದ ಸೋದರಮಾವನೂ ಈ ಘಟನೆಯಿಂದ ನೊಂದಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನೇಣಿಗೆ ಶರಣಾದ ಪತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದಾರೆ. ಡೆತ್‍ನೋಟ್‍ನಲ್ಲಿ ತನ್ನ ಹೆಂಡತಿ ಬೇರೊಬ್ಬನ ಜೊತೆ ಪರಾರಿಯಾಗಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾರೆ.

ಪತ್ನಿ ಪರಾರಿಯಾದ ಬಳಿಕ ಹಲವರು ಹರೀಶ್ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದರು. ಅಲ್ಲದೇ ಪ್ರಾಣ ಬೆದರಿಕೆ ಕೂಡ ಎದುರಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ತನ್ನ ಅಂತ್ಯ ಸಂಸ್ಕಾರವನ್ನು ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆ ಡೆತ್‍ನೋಟ್‍ನಲ್ಲಿ ಆತ ಬರೆದಿಟ್ಟಿದ್ದಾರೆ. ಬಳಿಕ ಜಮೀನಿಗೆ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಯಿಂದ ಗುಂಡಿನ ದಾಳಿ: ಪತ್ನಿ, ಮೂವರು ಸಂಬಂಧಿಕರ ಹತ್ಯೆ

ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಮಹಿಳೆಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.‌ ಮೃತ ಹರೀಶ್ ಪತ್ನಿ ಸರಸ್ವತಿ ಅವರ ಸೋದರಮಾವ ರುದ್ರೇಶ್ (40) ಮದುವೆ ಮಾಡಿಸಿದ್ದರು. ಹರೀಶ್ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ತಾನು ಕೂಡ ವಿಷ ಸೇವಿಸಿ ರುದ್ರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೆಕೊಂಡದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರುದ್ರೇಶ್ ಅವರನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ರುದ್ರೇಶ್ ಕೂಡ ಸಾವನ್ನಪ್ಪಿದ್ದಾರೆ.

ಹರೀಶ್‌ ಕೇರ

View all posts by this author