ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Davanagere South byelection: ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ; ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌ ಶೋ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಾಗಿದೆ.

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (Davanagere South byelection) ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ (Srinivas Daskariyappa) ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ ಮತ್ತು ಬಿಜೆಪಿ ಮುಖಂಡರ ಜತೆ ತೆರಳಿ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಳಿಕ ಬೃಹತ್‌ ರೋಡ್‌ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಾಗಿದೆ. ಮೆರವಣಿಗೆಯಲ್ಲಿ ಬಿಜೆಪಿ ಜನಪ್ರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಸೇರಿ ಹಲವರು ಭಾಗಿಯಾಗಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ನಗರ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ರೋಡ್‌ ಶೋ ಮಾಡಲಾಯಿತು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಎಸ್‌. ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಮತ್ತು ಪ್ರಮುಖರು ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿಗೆ ಜಿ.ಬಿ.ವಿನಯ್‌ಕುಮಾ‌ರ್ ಬೆಂಬಲ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ 'ಇನ್‌ಸೈಟ್ಸ್ ಐಎಎಸ್' ಸಂಸ್ಥಾಪಕ ಹಾಗೂ 'ಸ್ವಾಭಿಮಾನಿ ಬಳಗ'ದ ಅಧ್ಯಕ್ಷ ಜಿ.ಬಿ.ವಿನಯ್‌ಕುಮಾ‌ರ್ ಬೆಂಬಲ ಘೋಷಿಸಿದ್ದಾರೆ. ಇಂದು ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅವರು, ಆತ್ಮೀಯ ಸ್ನೇಹಿತನ ಪರ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗಲು ನಿರ್ಧರಿಸಿದ್ದಾರೆ.

ನಾನು ಸ್ವತಂತ್ರವಾಗಿ ಸ್ಪರ್ಧಿಸಿದರೆ ಹಿಂದೂಗಳ ಮತಗಳು ವಿಭಜನೆಯಾಗಲಿವೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗಲಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಕುಟುಂಬ ರಾಜಕಾರಣದ ವಿರುದ್ದ ನನ್ನ ನಿಲುವು ಗಟ್ಟಿಯಾಗಿದೆ. ಹೀಗಾಗಿ ಯಾವುದೇ ಷರತ್ತುಗಳಿಲ್ಲದೇ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಬೆಂಬಲಿಸುತ್ತಿದ್ದೇನೆ' ಎಂದು ತಿಳಿಸಿದ್ದಾರೆ.



Davanagere Byelection: ದಾವಣಗೆರೆಯಲ್ಲಿ ಸಮರ್ಥ ಶಾಮನೂರು ನಾಮಪತ್ರ; ಸಿಎಂ, ಡಿಸಿಎಂ ಸಾಥ್‌

ದಾವಣಗೆರೆಯಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ. ಒಂದೇ ಮನೆಯಲ್ಲಿ ಸಚಿವರು, ಸಂಸದರು ಇದ್ದಾರೆ. ಆದರೂ, ಅದೇ ಕುಟುಂಬದವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಅಧಿಕಾರದ ದಾಹ, ದುರಂಹಕಾರ, ಸರ್ವಾಧಿಕಾರಿ ಧೋರಣೆಗೆ ಮತದಾರರು ಪಾಠ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ.