ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ; ಆಪರೇಷನ್ ಥಿಯೇಟರ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಭೀಕರ ಆಕ್ಸಿಜನ್ ಸಿಲಿಂಡ‌ರ್ ಸ್ಫೋಟ ಸಂಭವಿಸಿದೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (OT) ಇದ್ದಕ್ಕಿದ್ದಂತೆ ಸಿಲಿಂಡ‌ರ್ ಸ್ಫೋಟಗೊಂಡಿದ್ದರಿಂದ, ಇಡೀ ಆವರಣದಲ್ಲಿ ದಟ್ಟವಾದ ಹೊಗೆ ಆವರಿಸಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಏಕಾಏಕಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ.

ಆಪರೇಷನ್ ಥಿಯೇಟರ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 30, 2026 12:41 PM

ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಭೀಕರ ಆಕ್ಸಿಜನ್ ಸಿಲಿಂಡ‌ರ್ ಸ್ಫೋಟ (Davangere District Hospital) ಸಂಭವಿಸಿದೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (OT) (Fire Accident) ಇದ್ದಕ್ಕಿದ್ದಂತೆ ಸಿಲಿಂಡ‌ರ್ ಸ್ಫೋಟಗೊಂಡಿದ್ದರಿಂದ, ಇಡೀ ಆವರಣದಲ್ಲಿ ದಟ್ಟವಾದ ಹೊಗೆ ಆವರಿಸಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಏಕಾಏಕಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಆಪರೇಷನ್ ಥಿಯೇಟರ್​ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳು ಸುಟ್ಟು ಕರಕಲಾಗಿವೆ.

ಆಪರೇಷನ್ ಥಿಯೇಟರ್ ಸುತ್ತಮುತ್ತಲಿನ ಇತರೆ ಕೊಠಡಿಗ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅರೋಗ್ಯ ಇಲಾಖೆ ಸಿಬ್ಬಂದಿ ಹೊರ ಓಡಿ ಬಂದಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸ್ಫೋಟಕ್ಕೆ ನಿಖರವಾದ ಕಾರಣವೇನು? ಆಪರೇಷನ್ ಥಿಯೇಟರ್‌ನಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ? ಎಂದು ತನಿಖೆ ನಡೆಸಲಾಗುತ್ತಿದ್ದು, ಸದ್ಯ ಆಸ್ಪತ್ರೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ನಡೆದಾಗ ಏಳೆಂಟು ಜನ ಸಿಬ್ಬಂದಿ ಮಾತ್ರ ಇದ್ದೆವು. ಏಕಾಏಕಿ ಸ್ಪಾರ್ಕ್​ ಕಾಣಿಸಿಕೊಂಡಿತು. ಕೂಡಲೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಡವು. ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಕೂಡ ನೀಡಿದೆವು. ಅದೃಷ್ಟವಶಾತ್ ಯಾವುದೇ ರೋಗಿ ಆಪರೇಷನ್ ಥಿಯೇಟರ್​ನಲ್ಲಿ ಇರಲಿಲ್ಲ. ಹಾಗಾಗಿ ಅವಘಡವೊಂದು ತಪ್ಪಿದೆ. ಕೂಡಲೇ ನಾವು ಹೊರಬಂದೆವು. ನಿಜಕ್ಕೂ ಮರುಜೀವ ಪಡೆಯುವಂತಾಗಿದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳಿದರು.

ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ -119 ರಲ್ಲಿರುವ ಅರಣ್ಯ ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಹವಾನಿಯಂತ್ರಣ (ಎಸಿ) ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ 21ನೇ ಮಹಡಿಯಲ್ಲಿ ಸಂಭವಿಸಿದೆ. ಜ್ವಾಲೆಗಳು ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ಸೊಸೈಟಿ ಸಂಕೀರ್ಣದಲ್ಲಿದ್ದ ಜನರು ಭಯಭೀತಗೊಂಡಿದ್ದಾರೆ. ನಿವಾಸಿಗಳು ತಕ್ಷಣ ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹಲವಾರು ಅಗ್ನಿಶಾಮಕ ದಳದವರು ಮತ್ತು ಸ್ಥಳೀಯ ಪೊಲೀಸ್ ತಂಡವು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಿಬ್ಬಂದಿ ಮತ್ತು ಆಡಳಿತವು ಹತ್ತಿರದ ಫ್ಲಾಟ್‌ಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ.