ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹರಿಹರ ಪೀಠದ ಅವ್ಯವಹಾರ: ಗವರ್ನರ್‌ ಎಂಟ್ರಿ

ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ವೀರಶೈವ ಪಂಚಮಸಾಲಿ ಮಠದ ಟ್ರಸ್ಟ್‌ʼನಿಂದ 10 ಕೋಟಿ ರುಪಾಯಿ ಅವ್ಯವಹಾರ ಆರೋಪ ಕೇಳಿ ಬಂದಿತ್ತು. ಹಿಂದುಳಿದ ವರ್ಗಗಳ ಇಲಾಖೆಯಿಂದ ವಸತಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಬಿಡುಗಡೆಯಾಗಿದ್ದ 10 ಕೋಟಿ ರು. ಅನುದಾನದಲ್ಲಿ ಹಣ ದುರ್ಬಳಕೆಯಾಗಿದೆ ಎಂದು ಪಂಚಮಸಾಲಿ ಮಠದ ಲೆಕ್ಕಕೊಡಿ ಚಳವಳಿ ಅಧ್ಯಕ್ಷ ಎಂ.ಜಿ.ಪರಮೇಶ್ವರ ಗೌಡ ಹಾಗೂ ಹರಿಹರದ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರು ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದರು.

ಹರಿಹರ ಪೀಠದ ಅವ್ಯವಹಾರ: ಗವರ್ನರ್‌ ಎಂಟ್ರಿ

-

Profile
Ashok Nayak Sep 28, 2026 9:38 AM

ಟ್ರಸ್ಟ್ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಸಿಎಸ್‌ಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಹರಿಹರ ಪಂಚಮಸಾಲಿ ಪೀಠದ ಗದ್ದಲಕ್ಕೆ ಇದೀಗ ರಾಜ್ಯಪಾಲರ ಪ್ರವೇಶವಾಗಿದ್ದು, ಟ್ರಸ್ಟ್ ವಿರುದ್ಧ ಕೇಳಿ ಬಂದಿರುವ ಆರೋಪದ ವಿರುದ್ಧ ತನಿಖೆ ನಡೆಸಲು ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ವೀರಶೈವ ಪಂಚಮಸಾಲಿ ಮಠದ ಟ್ರಸ್ಟ್‌ʼನಿಂದ 10 ಕೋಟಿ ರುಪಾಯಿ ಅವ್ಯವಹಾರ ಆರೋಪ ಕೇಳಿ ಬಂದಿತ್ತು. ಹಿಂದುಳಿದ ವರ್ಗಗಳ ಇಲಾಖೆಯಿಂದ ವಸತಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಬಿಡುಗಡೆಯಾಗಿದ್ದ 10 ಕೋಟಿ ರು. ಅನುದಾನದಲ್ಲಿ ಹಣ ದುರ್ಬಳಕೆಯಾಗಿದೆ ಎಂದು ಪಂಚಮಸಾಲಿ ಮಠದ ಲೆಕ್ಕಕೊಡಿ ಚಳವಳಿ ಅಧ್ಯಕ್ಷ ಎಂ.ಜಿ.ಪರಮೇಶ್ವರ ಗೌಡ ಹಾಗೂ ಹರಿಹರದ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರು ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದರು. ಈ ದೂರಿನ ಆಧಾರದಲ್ಲಿ ತನಿಖೆ ನಡೆಸು ವಂತೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಗೆ ರಾಜ್ಯ ಪಾಲರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Karnataka Govt Vs Governor: ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ: ಸಿಎಂ

ನಕಲಿ ಖಾತೆಗಳ ಆರೋಪ: ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ, ಕೆಲವು ಟ್ರಸ್ಟಿಗಳು ಮತ್ತು ಜವಾಬ್ದಾರಿಯುತ ವ್ಯಕ್ತಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿಸುವ ಮೂಲಕ ಸರಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಪ್ರಾಥಮಿಕ ಹಂತದ ದಾಖಲೆಗಳು ಮತ್ತು ಸಾಕ್ಷ್ಯ ಸಮೇತ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು.

ಈ ದೂರಿನ ಆಧಾರದಲ್ಲಿ ಸಾರ್ವಜನಿಕ ಹಣ ಮತ್ತು ಅನುದಾನದ ದುರ್ಬಳಕೆಯ ಗಂಭೀರ ಸ್ವರೂಪ ವನ್ನು ಪರಿಗಣಿಸಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ದೂರುದಾರರ ಅರ್ಜಿ ಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರಿಗೆ ತನಿಖೆಯ ಜವಾಬ್ದಾರಿಯನ್ನು ವಹಿಸಿ, ಅನುದಾನ ಎಲ್ಲಿ ಮತ್ತು ಹೇಗೆ ಬಳಕೆಯಾಗಿದೆ ಎಂಬುದರ ಕುರಿತು ಕೂಡಲೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.