ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLC Abdul Jabbar: ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆ; ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ದಿಢೀರ್‌ ರಾಜೀನಾಮೆ!

Karnataka Congress: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅವರು ಪ್ರಚಾರದಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿತ್ತು. ಹೈಕಮಾಂಡ್‌ ಸೂಚನೆ ಹಿನ್ನೆಲೆ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್

ದಾವಣಗೆರೆ: ಉಪ ಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಇದೀಗ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅವರು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ನಡೆದ ಆಂತರಿಕ ಚಟುವಟಿಕೆಗಳ ಬಗ್ಗೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಅಲ್ಪಸಂಖ್ಯಾತ ನಾಯಕರ ನಡವಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು ಎನ್ನಲಾಗಿದೆ. ಹೀಗಾಗಿ ಹೈಕಮಾಂಡ್ ಸಸ್ಪೆಂಡ್ ಮಾಡುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಸರಿಯಾಗಿ ಪ್ರಚಾರ ಮಾಡಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ. ಜಮೀರ್ ಜತೆಗೆ ಎಂಎಲ್‌ಸಿ ಹಾಗೂ ಟಿಕೆಟ್‌ ಆಕಾಂಕ್ಷಿ ಅಬ್ದುಲ್ ಜಬ್ಬಾರ್ ಸಹ ಪ್ರಚಾರದಿಂದ ದೂರ ಉಳಿದಿದ್ದರು. ಯಾರೆಲ್ಲ ಪ್ರಚಾರ ನಡೆಸಲಿಲ್ಲವೋ ಅವರ ವಿರುದ್ಧ ಕ್ರಮ ಆಗಲೇಬೇಕೆಂದು ಒಂದು ಬಣ ಪಟ್ಟು ಹಿಡಿದಿತ್ತು. ಈ ಬೆನ್ನಲ್ಲೇ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಜಮೀರ್ ಅಹ್ಮದ್ ಸಚಿವ ಸ್ಥಾನಕ್ಕೂ ಕುತ್ತು?

ಇನ್ನು ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಖಾನ್ ಅವರಿಗೂ ರಾಜೀನಾಮೆ ನೀಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಇನ್ನು ಜಮೀರ್ ಅಹ್ಮದ್ ಅವರ ಸಚಿವ ಸ್ಥಾನಕ್ಕೂ ಕುತ್ತು ಬರಲಿದೆ ಎನ್ನಲಾಗಿದೆ.

Rupali Naik Interview: ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ

ಎಂಎಲ್‌ಸಿ ಅಬ್ದುಲ್ ಜಬ್ಬಾರ್‌ ಹೇಳಿದ್ದೇನು?

ಕ್ಷೇತ್ರದಲ್ಲಿ ಯಾರಿಗಾದರೂ ಅಲ್ಪಸಂಖ್ಯಾತರಿಗೆ ಟಿಕೆಟ್‌ ಕೊಡಿ ಎಂದು ಕೇಳಿದ್ದೆವು. ನೀವು ಟಿಕೆಟ್‌ಗೆ ಪ್ರಯತ್ನ ಮಾಡಿ ಅಂತ ನನಗೆ ಶಾಸಕ ರಿಜ್ವಾನ್‌ ಹೇಳಿದ್ದರು. ಆದರೂ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ. ನಾನು ಪ್ರಚಾರಕ್ಕೆ ಹೋಗದೆ ಇರುವುದಕ್ಕೆ 2 ಕಾರಣ ಇದೆ. ಒಂದು ಅನಾರೋಗ್ಯ, ಎರಡನೇಯದು ನನ್ನನ್ನು ಯಾರೂ ಪ್ರಚಾರಕ್ಕೆ ಕರೆದಿಲ್ಲ. ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎಂದು ಗೊತ್ತಾಯಿತು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.