ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Micro Finance Torture: ಮೈಕ್ರೋ ಫೈನಾನ್ಸ್‌ ಕಿರುಕುಳ; ನಂಜನಗೂಡಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ, ದಾವಣಗೆರೆಯಲ್ಲಿ ನದಿಗೆ ಹಾರಿದ ಶಿಕ್ಷಕಿ!

Micro Finance Torture: ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ರೈತ ಮಹಿಳೆ ಹಾಗೂ ಮತ್ತೊಂದು ಪ್ರಕರಣದಲ್ಲಿ ಮಲ್ಕುಂಡಿ ಗ್ರಾಮದ 33 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಬಿಟ್ಟಿದ್ದಾರೆ. ಅದೇ ರೀತಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಮೈಕ್ರೋ ಫೈನಾನ್ಸ್‌ ಕಿರುಕುಳ; ನಂಜನಗೂಡಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ, ದಾವಣಗೆರೆಯಲ್ಲಿ ನದಿಗೆ ಹಾರಿದ ಶಿಕ್ಷಕಿ!

Profile Prabhakara R Jan 27, 2025 7:19 PM

ಮೈಸೂರು: ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಬಲವಂತವಾಗಿ ಸಾಲ ವಸೂಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರದ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲೇ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿ ಕಿರುಕುಳದಿಂದ ಒಂದೇ ದಿನ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಮತ್ತೊಂದು ಪ್ರಕರಣದಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಬಿಟ್ಟಿದ್ದಾರೆ.

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ರೈತ ಮಹಿಳೆ ಜಯಶೀಲ (53) ಎಂಬುವವರು ಮಾಡಿದ ಸಾಲದ ಕಂತು ಕಟ್ಟಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಿಳೆ ಸಾವಿಗೆ ಸಾಲ ನೀಡಿದ ಸಂಸ್ಥೆಗಳ ಕಿರುಕುಳವೇ ಕಾರಣವೆಂದು ಸಂಬಂಧಿಕರು ಆರೋಪಿಸಿದ್ದು, ಈ ಸಂಬಂದ ನಂಜನಗೂಡು ಗಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ಮಹಿಳೆ ಜಯಶೀಲ ಅಂಬಳೆ ಗ್ರಾಮದಲ್ಲಿ ಚಿಕ್ಕ ಮನೆ ನಿರ್ಮಿಸಿಕೊಂಡು ವ್ಯವಸಾಯ ಹಾಗೂ ಹಸು ಸಾಕಾಣಿಕೆ ಮಾಡುತ್ತಿದ್ದರು. ಹೈನುಗಾರಿಕೆ ಮಾಡಲು ಗ್ರಾಮಕ್ಕೆ ಬರುವ ವಿವಿಧ ಮೈಕ್ರೋ ಫೈನಾನ್ಸ್‌ಗಳಲ್ಲಿ 5 ಲಕ್ಷಕ್ಕೂ ಹೆಚ್ಚಿನ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು 20 ಸಾವಿರ ರೂಪಾಯಿ ಇಎಂಐ ಕಟ್ಟುತ್ತಿದ್ದರು. ಇತ್ತೀಚಿಗೆ ಹಸು ಸಾಲ ತೆಗೆದುಕೊಂಡು , ಹಸುವನ್ನು ಖರೀದಿಸಿದ್ದರು. ಆದರೆ ದುರದೃಷ್ಟವಶಾತ್​ ಆ ಹಸು ಅನಾರೋಗ್ಯದಿಂದ ಇತ್ತೀಚೆಗೆ ಮೃತಪಟ್ಟಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ತಲುಪಿದ್ದ ಮಹಿಳೆ ಜಯಶೀಲ, ಸಮೀಪದ ಹುಲ್ಲಹಳ್ಳಿ ಪಟ್ಟಣಕ್ಕೆ ಹೋಗಿ, ತನ್ನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ವಿವಿಧ ಮೈಕ್ರೋ ಫೈನಾನ್ಸ್‌ಗಳಿಂದ ತೆಗೆದುಕೊಂಡಿದ್ದ ಸಾಲ ಮರು ಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿವರಿಸಲಾಗಿದೆ.

33 ವರ್ಷದ ವ್ಯಕ್ತಿ ಆತ್ಮಹತ್ಯೆ

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಲತಾ ಎಂಬುವವರ ಪತಿ ಕೃಷ್ಣಮೂರ್ತಿ (33) ವ್ಯಕ್ತಿ ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವಿವಿಧ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ 6 ಲಕ್ಷ ಹಣವನ್ನು ಸಾಲ ಪಡೆದುಕೊಂಡಿದ್ದರು. ಸಾಲ ಕಟ್ಟಲಾಗದೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Hubli News: ಪತ್ನಿ ಕಿರುಕುಳ; ಡಿವೋರ್ಸ್ ಅರ್ಜಿ ವಿಚಾರಣೆ ದಿನವೇ ಪತಿ ಆತ್ಮಹತ್ಯೆ!

ದಾವಣಗೆರೆಯಲ್ಲಿ ತುಂಗಭದ್ರಾ ನದಿಗೆ ಹಾರಿದ ಶಿಕ್ಷಕಿ

Self harm (3)

ದಾವಣಗೆರೆ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯು ಶಿವಮೊಗ್ಗದ ಟಿಟಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಹೊನ್ನಾಳಿ ಪಟ್ಟಣದ ರಾಘವೇಂದ್ರ ದೇವಸ್ಥಾನದ ಬಳಿ ನದಿಗೆ ಹಾರಿ ಜೀವ ಕಳೆದುಕೊಂಡಿದ್ದಾರೆ.

ನೆನ್ನೆ ಶಾಲೆಯಲ್ಲಿ ಗಣರಾಜ್ಯೋತ್ಸವ ಮುಗಿಸಿಕೊಂಡು ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಶಿಕ್ಷಕಿಗೆ ಸಾಲ ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಒತ್ತಡ ಹಾಕಿದ್ದರು ಎನ್ನಲಾಗಿದೆ. ಫೈನಾನ್ಸ್ ಸಿಬ್ಬಂದಿ ಒತ್ತಡಕ್ಕೆ ಬೇಸತ್ತು ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಷ್ಪಲತಾ ಪತಿ ಹಾಲೇಶ್ ಕೂಡ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು, ಮನೆ ಕಟ್ಟಲು ಟಿಟಿ ಕ್ಯಾಪಿಟಲ್ ಫೈನಾನ್ಸ್‌ನಲ್ಲಿ 38 ಲಕ್ಷ ಸಾಲ ಮಾಡಿದ್ದರು. ಸಾಲದ ಕಿರುಕುಳ ಹೆಚ್ಚಾದ ಹಿನ್ನೆಲೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಕುರಿತು ಪತಿ ಹಾಲೇಶ್ ಹೊನ್ನಾಳಿ ಪೊಲೀಸರಿಗೆ ದೂರು ನೀಡಿದ್ದಾರೆ.