ದಾವಣಗೆರೆ: ರಂಜಾನ್ ಸಾಮೂಹಿಕ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿಯಿಂದ (honeybees attack) 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ (Davangere) ತಾಲೂಕಿನ ಆನಗೋಡು ಬಳಿ ನಡೆದಿದೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ ಮುಸ್ಲಿಂ ಬಾಂಧವರು ಆನಗೋಡು ಬಳಿಯ, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ಗೂಡಿಗೆ ಕೆಲ ಯುವಕರು ಕಲ್ಲು ಹೊಡೆದಿದ್ದಾರೆ ಎನ್ನಲಾಗಿದೆ. ಈ ಪರಿಣಾಮ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಯುವಕರು ಮಕ್ಕಳು ಹೆಣ್ಣು ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೆ ಒಳಗಾದವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಜ್ಜೇನು ದಾಳಿ ನಡೆಸುತ್ತಿದ್ದಂತೆ ಒಣ ಹುಲ್ಲಿಗೆ ಬೆಂಕಿ ಹಾಕಿ ಹೊಗೆ ಮೂಲಕ ಸ್ಥಳೀಯರು ಜೇನು ಹುಳ ಓಡಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು
ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಬಳಿ ನಡೆದಿದೆ. ಕಡದಕಟ್ಟೆ ಗ್ರಾಮದ ನಿವಾಸಿ ಕಾರ್ತಿಕ್ (23) ಮೃತ ದುರದೇವಿ ಎಂದು ತಿಳಿದುಬಂದಿದೆ.
Self Harming: ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ!
ಯುಗಾದಿ ಬಳಿಕ ಪುಣ್ಯ ಕ್ಷೇತ್ರದಲ್ಲಿ ಕಾರ್ತಿಕ್ ಜಾತ್ರೆಗೆ ಹೋಗಿದ್ದ. ಗೋವಿನಕೋವಿ ಗ್ರಾಮದ ಬಳಿ ಇರುವ ಗೆಡ್ಡೆ ರಾಮೇಶ್ವರ ಪುಣ್ಯಕ್ಷೇತ್ರಕ್ಕೆ ಹೋಗಿದ್ದ ಈ ವೇಳೆ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದಾಗ ನೀರಿನಲ್ಲಿ ಮುಳುಗಿ ಕಾರ್ತಿಕ್ ಸಾವನಪ್ಪಿದ್ದಾನೆ. ನದಿಯಿಂದ ಕಾರ್ತಿಕ್ ಮೃತದೇಹವನ್ನ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.