ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾವಣಗೆರೆ ಗಡಿ ಗ್ರಾಮದಲ್ಲಿ ನಿಗೂಢ ಶಬ್ದ; ಕಂಪಿಸಿದ ಭೂಮಿ, ಬೆಚ್ಚಿ ಬಿದ್ದ ಗ್ರಾಮಸ್ಥರು

Davanagere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರರೆ. ಕೆಲ ಕಡೆ ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದೆ.

ಸಂಗ್ರಹ ಚಿತ್ರ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರರೆ. ಕೆಲ ಕಡೆ ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದ್ದು, ಶಬ್ದವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಲೆಕ್ಕಿಗರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಮನವಿ ಮಾಡಿದ್ದಾರೆ.

ದೆಹಲಿ ಸ್ಫೋಟ ಪ್ರಕರಣ; ಶೂನಲ್ಲಿ ಸ್ಫೋಟಕ ಇಟ್ಟು ಬ್ಲಾಸ್ಟ್‌ ಮಾಡಲು ನಡೆದಿತ್ತಾ ಪ್ಲಾನ್‌?

ಕಳೆದ ತಿಂಗಳು ಕೋಲಾರದಲ್ಲಿ ನಿಗೂಢ ಶಬ್ದ ಕೇಳಿ ಬಂದಿತ್ತು. ಮಾಲೂರು ತಾಲೂಕಿನ ಟೇಕಲ್ , ಮಾಸ್ತಿ, ಲಕ್ಕೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿನಿಗೂಢದ ಶಬ್ದದ ಅನುಭವವಾಗಿದ್ದು, ಭಯಾನಕ ಶಬ್ದ ಕೇಳಿಸಿಕೊಂಡು ಗಾಬರಿಯಾಗಿ ಮನೆಯಿಂದ ಹೊರ ಓಡಿ ಬಂದಿದ್ದರು. ಯಾವುದಾದರೂ ಸ್ಫೋಟ ಸಂಭವಿಸಿದೆಯಾ ಎಂದು ಗಾಬರಿಯಾಗಿ ಹುಡುಕಾಟದಲ್ಲಿಯೂ ತೊಡಗಿದ್ದರು. ಈ ಹಿನ್ನೆಲೆಯಲ್ಲಿಎಲ್ಲಗ್ರಾಮಗಳು ಮತ್ತು ಹಳ್ಳಿಗಳಲ್ಲಿಮಾಹಿತಿ ಪಡೆದು ಎಲ್ಲಿಯಾವುದೇ ರೀತಿಯಾದ ಅನಾಹುತ ಆಗಿಲ್ಲ. ಆದರೆ ಶಬ್ದ ಕೇಳಿ ಬಂದಿದ್ದು ನಿಜ, ಅದು ಎಲ್ಲಿಂದ ಬಂತು ಎಂಬುದನ್ನು ಸರಿಯಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.