ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heavy explosion: ದಾವಣಗೆರೆಯಲ್ಲಿ ತಡರಾತ್ರಿ ಭಾರೀ ಸ್ಫೋಟದ ಶಬ್ದ- ಬೆಚ್ಚಿ ಬಿದ್ದ ಜನ

ಗಾಢ ನಿದ್ದೆಯಲ್ಲಿದ್ದ ದಾವಣಗೆರೆ ಜನರಲ್ಲಿ ಸ್ಫೋಟದ ಸದ್ದೊಂದು ಆತಂಕ ಸೃಷ್ಟಿಸಿರುವ ಘಟನೆ ವರದಿಯಾಗಿದೆ. ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ.

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಿನ್ನೆ ತಡರಾತ್ರಿ ಏಕಾಏಕಿ ಸ್ಫೋಟದ(Heavy explosion) ಸದ್ದೊಂದು ಕೇಳಿಬಂದಿದೆ.ಗಾಢ ನಿದ್ದೆಯಲ್ಲಿದ್ದ ಜನ ಸ್ಫೋಟದ ಸದ್ದು ಕೇಳಿ ಬೆಚ್ಚಿ ಬಿದ್ದಿದ್ದೂ, ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಜಗಳೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಏನಿದು ಸ್ಫೋಟ? ಈ ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನೂ ನಿಗೂಢವಾಗಿದೆ. ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ಜನವಸತಿ ಪ್ರದೇಶದಲ್ಲಿ ಸ್ಪೋಟಕ ಬಳಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Terrorists convicted: ಚರ್ಚ್‌ಸ್ಟ್ರೀಟ್‌ ಸ್ಫೋಟಕ್ಕೆ ಸ್ಫೋಟಕ ಪೂರೈಕೆ, ಭಟ್ಕಳದ ಮೂವರು ಉಗ್ರರಿಗೆ ಶಿಕ್ಷೆ