ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು

Davanagere news: ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರ ಸಾವು

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಭದ್ರಾ ಕಾಲುವೆಗೆ (Bhadra canal) ಕಾರು ಬಿದ್ದು (Road Accident) ಇಬ್ಬರು ಸಾವಿಗೆ (Death) ಈಡಾಗಿದ್ದಾರೆ. ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರ್ಘಟನೆ ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಬಳಿಯ ಭದ್ರಾ ಮುಖ್ಯ ಕಾಲುವೆಯಲ್ಲಿ ಕಾರು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಲ್ಲಿಕಾರ್ಜುನ (29) ಹಾಗೂ ಸಿದ್ದೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಮೆಂಟ್‌ ಮಿಕ್ಸರ್ ಲಾರಿ ಹರಿದು ಮಗು ಸಾವು

ಬೆಂಗಳೂರು: ಸಿಮೆಂಟ್ ಮಿಕ್ಸರ್​ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ (Wall Collapse) ಬಲಿಯಾಗಿರುವ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ನವಂಬರ್ 7 ರಂದು ಸಂಜೆ 3:11 ಸುಮಾರಿಗೆ ಈ ಘಟನೆ ನಡೆದಿದ್ದು, ಸಿಮೆಂಟ್ ಮಿಕ್ಸರ್​ ಲಾರಿ 1 ವರ್ಷ 8 ತಿಂಗಳ ಮುದ್ದಾದ ಮಗು ಪ್ರಣವ್​ನ ಬಲಿ ಪಡೆದಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಬರ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿ, ಪ್ರಣವ್​ ಮನೆಯ ರಸ್ತೆಯಲ್ಲೇ ಹಾದು ಹೋಗ್ತಿತ್ತು. ಈ ವೇಳೆ (Wall Collapse) ಲಾರಿಯು ಮೇಲಿದ್ದ ವಿದ್ಯುತ್ ತಂತಿಗೆ ತಾಗಿದೆ. ಇದನ್ನ ಅರಿಯದ ಚಾಲಕ ತಂತಿಯನ್ನು ಎಳೆದುಕೊಂಡೆ ಹೋಗಿದ್ದಾನೆ.‌

ಇದನ್ನೂ ಓದಿ: Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

ವೈರಿಂಗ್ ಕಂಬ ಕಿತ್ತು ಬಂದು ಮನೆಯ ಗೋಡೆ ಮೇಲೆ ಕುಸಿದಿದೆ. ಈ ವೇಳೆ ಮನೆ ಕಾಂಪೌಂಡ್​ನಲ್ಲಿ ಆಟ ಆಡ್ತಿದ್ದ ಏನೂ ಅರಿಯದ ಮಗು ಮೇಲೆ ಮನೆ ಗೋಡೆ ಅವಶೇಷ‌ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಣವ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದ್ರೆ ಈ ಘಟನೆ ಬಳಿಕ ಕಾಂಕ್ರೀಟ್ ಮಿಕ್ಸರ್ ಚಾಲಕ ಪರಾರಿಯಾಗಿದ್ದಾನೆ.

ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಮಗು ಪ್ರಣವ್ ಸಾವನ್ನಪ್ಪಿದ ಬಾಲಕ. ಮಗನನ್ನು ಕಳೆದುಕೊಂಡ ಪೋಷಕರು ಗೋಳಿಡುತ್ತಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನ ಶಿಫ್ಟ್ ಮಾಡಲಾಗಿದೆ.

ಹರೀಶ್‌ ಕೇರ

View all posts by this author