ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆ
Vishwavani News
September 20, 2022
ದಾವಣಗೆರೆ : ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ವಿತರಿಸುವ ಪಡಿತರದಲ್ಲಿ ಗೋಲ್ ಮಾಲ್ ಆರೋಪ ಮಾಡಿ ನ್ಯಾಯ ಸಿಗದೇ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕ ಜನರಿಗೆ ವಿತರಿಸುವ ಅಕ್ಕಿಯಲ್ಲಿ ಗೋಲ್ ಮಾಲ್ ಮಾಡುತ್ತಿದ್ದಾನೆ ಎಂದು ಆರೋಪಿ ಅಂಗಡಿ ಮಾಲೀಕನ ವಿರುದ್ಧ ಹೋರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ನೋಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ವೀರಾಚಾರಿ ಅವರು ಸುಮಾರು 3 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ರಾಜ್ಯೋ ತ್ಸವ ಪ್ರಶಸ್ತಿ ನೀಡಿತ್ತು. ಅವರು ಇತ್ತೀಚೆಗೆ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮದ ವಿರುದ್ಧ ಹೋರಾಟ ಮಾಡು ತ್ತಿದ್ದರು. ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ ಎಂದು ಹೇಳಿದ್ದರು.