Davanagere News: ಬಟ್ಟೆ ತೊಳೆಯುವ ವೇಳೆ ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು
Davanagere News: ದಾವಣಗೆರೆ ಜಿಲ್ಲೆಯ ಜಿಲ್ಲೆಯ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ- ದುಗ್ಗೇನಹಳ್ಳಿ ಗ್ರಾಮದ ಮಧ್ಯೆ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಅಕ್ಕ-ತಂಗಿ ಸೇರಿ ಮೂವರು ಮೃತಪಟ್ಟಿದ್ದಾರೆ.


ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಅಕ್ಕ-ತಂಗಿ ಸೇರಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ- ದುಗ್ಗೇನಹಳ್ಳಿ ಗ್ರಾಮದ ಮಧ್ಯೆ ನಡೆದಿದೆ. ಗ್ರಾಮದ ಸಮೀಪದ ಹೊಸಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದೀಪಾರಾಣಿ(30), ದಿವ್ಯಾ(26) ಮತ್ತು ಚಂದನಾ(19) ಮೃತಪಟ್ಟಿದ್ದಾರೆ. ಮೃತರ ಪೈಕಿ ದಿವ್ಯಾ ಮತ್ತು ಚಂದನಾ ಸಹೋದರಿಯರಾಗಿದ್ದು, ದೀಪಾರಾಣಿ ಪಕ್ಕದ ಮನೆಯ ಯುವತಿಯಾಗಿದ್ದಾಳೆ.
ಮಧ್ಯಾಹ್ನ ಬಟ್ಟೆ ತೊಳೆಯುವಾಗ ಚಂದನಾ ಈಜಲೆಂದು ಕೆರೆಗೆ ಇಳಿದಿದ್ದಾಳೆ. ಕೆಸರಿನಲ್ಲಿ ಸಿಲುಕಿದ ಚಂದನಾಳನ್ನು ಕಾಪಾಡಲು ನೀರಿಗೆ ಇಳಿದ ಅಕ್ಕ ದಿವ್ಯಾ ಪ್ರಯತ್ನಿಸಿ ಆಕೆಯೂ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿದ್ದಾಳೆ. ಇಬ್ಬರನ್ನು ರಕ್ಷಿಸಲು ಹೋಗಿ ದೀಪಾರಾಣಿ ಕೂಡ ನೀರಿನಲ್ಲಿ ಮುಳುಗಿದ್ದಾಳೆ. ದೀಪಾರಾಣಿ ಮತ್ತು ದಿವ್ಯಾ ಅವರಿಗೆ ವಿವಾಹವಾಗಿದ್ದು, ದೀಪಾರಾಣಿಗೆ ಮೂವರು ಮಕ್ಕಳಿದ್ದಾರೆ. ದಿವ್ಯಾಗೆ ಒಂದು ವರ್ಷದ ಮಗುವಿದೆ.
ಚನ್ನಗಿರಿ ಅಗ್ನಿಶಾಮಕ ದಳದ ಕುಮಾರ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ಮೂವರ ಶವಗಳನ್ನು ಹೊರತೆಗೆದಿದ್ದಾರೆ. ತಹಸೀಲ್ದಾರ್ ಎನ್.ಜೆ. ನಾಗರಾಜ್, ವೃತ್ತ ನಿರೀಕ್ಷಕ ಕೆ. ರವೀಶ್ ಸ್ಥಳ ಪರಿಶೀಲನೆ ನಡೆಸಿದ್ದು, ಮೂವರ ಶವಗಳನ್ನು ಚನ್ನಗಿರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕ್ಕಮಗಳೂರಲ್ಲಿ ಮಹಿಳೆ ಸಾವು
ಚಿಕ್ಕಮಗಳೂರು: ಮಲೆನಾಡಿನಲ್ಲಿ ಕ್ಯಾಸನೂರು ಕಾಡಿನ ಕಾಯಿಲೆ (Kyasanur Forest Disease, KFD) ಅಥವಾ ಮಂಗನ ಕಾಯಿಲೆ (Monkey fever) ಉಲ್ಬಣಗೊಳ್ಳುತ್ತಿದೆ. ಇಂದು ಮಂಗನಕಾಯಿಲೆಯಿಂದ ಮತ್ತೊಬ್ಬ ಮಹಿಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಎನ್‌ಆರ್‌ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬವರೇ ಸಾವನ್ನಪ್ಪಿರುವ ಮಹಿಳೆ.
ಈ ಸುದ್ದಿಯನ್ನೂ ಓದಿ |Fake currecy: ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್
ಮಂಗನಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕಮಲಾ ಸಾವನ್ನಪ್ಪಿದ್ದಾರೆ. ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್‌ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.