ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ
ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ
Vishwavani News
August 3, 2022
ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು.
ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಜನ್ಮ ದಿನಾಚರಣೆ ನಿಮಿತ್ತ, 75ನೇ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದಿಂದ ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ಬಳಿಕ, ರಸ್ತೆ ಮಾರ್ಗವಾಗಿ ದಾವಣಗೆರೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಕೆಲ ಕಾಲ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಅನುಭವಿಸ ಬೇಕಾಯಿತು.
ಟ್ರಾಫಿಕ್ ಜಾಮ್ ನಿಂದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ತಡವಾಗಿ ಆಗಮಿಸುವ ಸಾಧ್ಯತೆ ಇದೆ.