ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vachanananda Swamiji: ಲೆಕ್ಕ ಕೊಡಿ ಎಂದು ಕೇಳಿದ್ದಕ್ಕೆ ಟಾರ್ಗೆಟ್ ಮಾಡಿದ್ದಾರೆ; ಉಚ್ಚಾಟನೆ ಬಗ್ಗೆ ವಚನಾನಂದ ಸ್ವಾಮೀಜಿ ಮೊದಲ ಪ್ರತಿಕ್ರಿಯೆ

ಸರ್ಕಾರದಿಂದ ಬಂದ ಅನುದಾನದ ಲೆಕ್ಕ ನೀಡುವಂತೆ ಭಕ್ತರು ಕೇಳಿದ್ದರು. ತಮ್ಮ ಮೇಲೆ ಬಂದ ಆರೋಪಕ್ಕೆ ಈಗ ನಮ್ಮನ್ನು ಹೊರಹಾಕಿದ್ದಾರೆ. ಸರ್ಕಾರದಿಂದ ಬಂದ ಅನುದಾನದ ಲೆಕ್ಕ ನೀಡುವಂತೆ ಭಕ್ತರು ಕೇಳಿದ್ದರು. ತಮ್ಮ ಮೇಲೆ ಬಂದ ಆರೋಪಕ್ಕೆ ಈಗ ನಮ್ಮನ್ನು ಹೊರಹಾಕಿದ್ದಾರೆ ಎಂದು ಧರ್ಮದರ್ಶಿ ಮಂಡಳಿ ವಿರುದ್ಧ ವಚನಾನಂದ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ.

ವಚನಾನಂದ ಸ್ವಾಮೀಜಿ.

ದಾವಣಗೆರೆ: ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್‌ನವರಿಗೆ ಲೆಕ್ಕ ಕೊಡಿ ಎಂದು ಕೇಳಿದ್ದಕ್ಕೆ ನನ್ನ ಟಾರ್ಗೆಟ್ ಮಾಡಿದ್ದಾರೆ. ವ್ಯವಸ್ಥಿತ ಷಡ್ಯಂತ್ರ ಮಾಡಿ ಉಚ್ಛಾಟನೆ ಮಾಡಿದ್ದಾರೆ. ಭಕ್ತರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ತಿಳಿಸಿದ್ದಾರೆ.

ಹರಿಹರ ಪಂಚಮಸಾಲಿ ಗುರುಪೀಠದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಂಚಮಸಾಲಿಗಳು ಪ್ರಬಲರಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಈ ಹಿಂದೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಇರಬಹುದು, ಸಿದ್ದಲಿಂಗ ಸ್ವಾಮೀಜಿ ಇರಬಹುದು, ಈಗ ನಮ್ಮನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ದೂರಿದರು.

ಟ್ರಸ್ಟಿಗಳ ಬಗ್ಗೆ ಮಾತನಾಡಿದ ಅವರು, ಕೆಲವರಿಗೆ ನಾವು ಹಿಂದೂಗಳು ಎಂದು ಹೇಳಬಾರದು. ಇನ್ನು ಕೆಲವರಿಗೆ ಲಿಂಗಾಯತ ಹಿಂದೂ ಎನ್ನಬಾರದು. ಇವತ್ತು ಸಭೆ ನಡೆಯುವ ಬಗ್ಗೆ ಯಾವುದೇ ನೋಟಿಸ್‌ ಸಹ ನೀಡಿಲ್ಲ. ಪಂಚಮಸಾಲಿ ಮಠ 12 ಜನರ ಮಠ ಅಲ್ಲ. ಈ ನಿರ್ಧಾರದಿಂದ ನನಗೆ ಯಾವುದೇ ಆತಂಕ ಇಲ್ಲ ಎಂದು ಹೇಳಿದರು.

Vachanananda Swamiji: ಹಣಕಾಸು ಅವ್ಯವಹಾರ ಆರೋಪ; ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ

ಸರ್ಕಾರದಿಂದ ಬಂದ ಅನುದಾನದ ಲೆಕ್ಕ ನೀಡುವಂತೆ ಭಕ್ತರು ಕೇಳಿದ್ದರು. ತಮ್ಮ ಮೇಲೆ ಬಂದ ಆರೋಪಕ್ಕೆ ಈಗ ನಮ್ಮನ್ನು ಹೊರಹಾಕಿದ್ದಾರೆ. ಪಂಚಮಸಾಲಿ ಸಮಾಜವೇ ನನ್ನ ಶ್ವಾಸ. ಸಮಾಜದ ಜನ ಹೇಳಿದಂತೆ ಕೇಳುತ್ತೇನೆ. ಪೀಠಕ್ಕೆ ಬಂದ ಮೇಲೆ ಭಕ್ತರ ಮನೆಗೆ ಹೋಗಬೇಕು ಎನ್ನುವ ಕನಸು ಕಂಡಿದ್ದೆ. ಆದರೆ ವ್ಯವಸ್ಥಿತವಾಗಿ ಹರಿಹರ, ದಾವಣಗೆರೆಗೆ ಹೋಗದಂತೆ ನೋಡಿಕೊಳ್ಳಲಾಗಿತ್ತು. ಮಠದಲ್ಲಿ ಬಸವಣ್ಣನವರ ಫೋಟೋ ಹಾಕಲು ಸಹ ಬಿಟ್ಟಿರಲಿಲ್ಲ ಎಂದು ಆರೋಪಿಸಿದ್ದಾರೆ.