ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Bypolls: ಉಪಚುನಾವಣೆ; ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದ ಸಿಎಂ

ಕಾಂಗ್ರೆಸ್ ಎಲ್ಲಾ ಜಾತಿ, ಧರ್ಮದವರನ್ನೂ ಜೊತೆಗೆ ಕೊಂಡೊಯ್ಯುವ ಪಕ್ಷ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಭಜನೆ ತಂದು ಓಟು ಕೇಳುವ ಕೆಟ್ಟ ರಾಜಕಾರಣವನ್ನು ನಾವು ಮಾಡುವುದಿಲ್ಲ. ಕೋಮುಗಲಭೆಗಳನ್ನು ಸಂಘಟಿಸಿ ರಾಜಕಾರಣ ಮಾಡುವುದು ಬಿಜೆಪಿಯ ಜಾಯಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ದಾವಣಗೆರೆ ಏ.7: ನಾವು ಮಾಡಿದ ಜನಪರ, ಅಭಿವೃದ್ಧಿ ಕೆಲಸಗಳ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಆದರೆ, ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Karnataka Bypolls) ಸಂಬಂಧ ಭಾರೀ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಆರು ಬಾರಿ ಶಾಸಕರಾಗಿದ್ದ ಶಾಮನೂರು‌ ಶಿವಶಂಕರಪ್ಪ ಅವರು ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳು ಸರಾಗವಾಗಿ ಮುಂದುವರೆಯಲು ಸಮರ್ಥ್ ಶಾಮನೂರು ಅವರನ್ನು ಸಮರ್ಥವಾಗಿ ಗೆಲ್ಲಿಸಿ ಮುನ್ನಡೆಸಿ ಎಂದು ಮನವಿ ಮಾಡಿದರು.

ಒಂಬತ್ತು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಅಭಿವೃದ್ಧಿ ಮಾಡಲಿಲ್ಲ. ಹೀಗಾಗಿ ತಾವು ಮಾಡಿದ ಕೆಲಸಗಳ ಆಧಾರದಲ್ಲಿ ಮತ ಕೇಳಲು ಸಾಧ್ಯವಾಗದೆ ನನಗೆ ಬಯ್ಯುತ್ತಾ ಮತ ಕೇಳುತ್ತಿದ್ದಾರೆ. ನಾನು ದುರ್ಬಲರ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ ಎನ್ನುವ ಕಾರಣದಿಂದಲೇ ನನ್ನನ್ನು ಬೈಯ್ದು ಓಟು ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಎಲ್ಲಾ ಜಾತಿ, ಧರ್ಮದವರನ್ನೂ ಜೊತೆಗೆ ಕೊಂಡೊಯ್ಯುವ ಪಕ್ಷ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಭಜನೆ ತಂದು ಓಟು ಕೇಳುವ ಕೆಟ್ಟ ರಾಜಕಾರಣವನ್ನು ನಾವು ಮಾಡುವುದಿಲ್ಲ. ಕೋಮುಗಲಭೆಗಳನ್ನು ಸಂಘಟಿಸಿ ರಾಜಕಾರಣ ಮಾಡುವುದು ಬಿಜೆಪಿಯ ಜಾಯಮಾನ ಎಂದರು.

ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರು 25 ಸಾವಿರ ಕೋಟಿ ಹಣ ಲೂಟಿ ಮಾಡಿರುವ ಭ್ರಷ್ಟರು ಎಂದು ಬಿಜೆಪಿಯವರೇ ಆಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ನೇರವಾಗಿ ಆರೋಪಿಸಿದ್ದಾರೆ. ಈ ಯಡಿಯೂರಪ್ಪ ಮತ್ತು ವಿಜಯೇಂದ್ರ ನಾಚಿಕೆ ಬಿಟ್ಟು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ.ಮೇಟಿ ಇಬ್ಬರೂ ಪ್ರಾಮಾಣಿಕ ನಾಯಕರು. ಇವರಿಬ್ಬರ ನಿಧನದಿಂದ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಗೆಲ್ಲುವುದು ಶತಃಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು.

Davanagere South by-election: ಅಲ್ಲಿ ಗಾಂಧಿ ಕುಟುಂಬ, ಇಲ್ಲಿ ಶಾಮನೂರು ಕುಟುಂಬ; ಬೇರೆ ಯಾರೂ ಸಮರ್ಥರಿಲ್ಲವೇ?: ಜೋಶಿ ಪ್ರಶ್ನೆ

ಕಾಂಗ್ರೆಸ್ ನುಡಿದಂತೆ ನಡೆದು‌, ಕೊಟ್ಟ ಭರವಸೆಗಳನ್ನು ಈಡೇರಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಕೆಲಸ ಮಾಡಿ ಬಂದು ನಿಮ್ಮಿಂದ ಅಭಿವೃದ್ಧಿ ಪರವಾಗಿ ಮತ ಕೇಳುತ್ತಿದ್ದೇವೆ. ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಈ ಕಾರಣದಿಂದ ನಮ್ಮ ಕೆಲಸಕ್ಕೆ ಕೈ ಹಿಡಿದು ಸಹಕರಿಸಿ ಎಂದರು.