ಕೊಪ್ಪಳ, ಮಾ. 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) (Karianna Sangati) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ. ಅವರ ಅಗಲಿಕೆಯಿಂದ ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ ಎಂದು ಹಲವರು ಸಂತಾಪ ಸೂಚಿಸಿದ್ದಾರೆ.
Surikumeru Govinda Bhat: ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ