ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಬಿಜೆಪಿ ಸಂಸ್ಕೃತಿ ಹೀನ ಪಕ್ಷ: ಡಿ.ಕೆ. ಶಿವಕುಮಾರ್ ವಾಗ್ದಾಳಿ

DK Shivakumar: ಬಿಜೆಪಿ ಸಂಸ್ಕೃತಿ ಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸಂಸ್ಕೃತಿ ಹೀನ ಪಕ್ಷ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Mar 21, 2025 9:52 PM

ಬೆಂಗಳೂರು: ಬಿಜೆಪಿ ಸಂಸ್ಕೃತಿ ಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?ʼ ಎಂದು ತಿರುಗೇಟು ನೀಡಿದರು.

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, ʼಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕುʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗವಾಡಿದರು.

ಈ ಸುದ್ದಿಯನ್ನೂ ಓದಿ | Honey Trap: ಹನಿ ಟ್ರ್ಯಾಪ್ ವಿಚಾರದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

DK Shivakumar: ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?- ಡಿ.ಕೆ.ಶಿವಕುಮಾರ್

ಬೆಂಗಳೂರು: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar)‌ ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಶುಕ್ರವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. 48 ಶಾಸಕರು ಹನಿಟ್ರ್ಯಾಪ್‌ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, ʼಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆʼ ಎಂದು ಕಾಲೆಳೆದರು.

ಮಾಡಿದ್ದುಣ್ಣೋ ಮಹಾರಾಯ

ಹನಿಟ್ರ್ಯಾಪ್ ಹಿಂದೆ ಡಿ.ಕೆ. ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, ʼವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್. ಅಶೋಕ್‌ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆʼ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನೂ ಓದಿ | Karnataka Weather: ಮುಂದಿನ 6 ದಿನ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ

ಕರ್ನಾಟಕದ ಬಂದ್ ಅವಶ್ಯಕತೆಯಿಲ್ಲ

ನಾಳಿನ (ಮಾ.22) ಕರ್ನಾಟಕ ಬಂದ್ ಬಗ್ಗೆ ಕೇಳಿದಾಗ, ʼರಾಜ್ಯದ ಹಿತಕ್ಕೆ ಒಳ್ಳೆ ಕೆಲಸಕ್ಕೆ ಏನಿದ್ದರೂ ನಾವು ಬೆಂಬಲ ನೀಡುತ್ತೇವೆ. ಕಾನೂನಿನಲ್ಲಿ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.