DK Shivakumar: ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ದಾಟುವುದಿಲ್ಲ- ಡಿ.ಕೆ. ಶಿವಕುಮಾರ್ ಹೀಗ್ಯಾಕೆ ಅಂದ್ರು?
DK Shivakumar Latest Statement: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ʼನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ, ಇಂದು ಸಭೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು ಎಂದು ತಿಳಿಸಿದ್ದಾರೆ.
ರಾಜಕೀಯ ರಂಗದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. -
ನವದೆಹಲಿ, ನ.6: ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಅವರು ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, ʼಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ (Bihar Election 2025) ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲʼ ಎಂದು ತಿಳಿಸಿದರು.
ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ʼನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ, ಇಂದು ಸಭೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು (ಮಾಧ್ಯಮ). ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳೀದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ. ಸಿಎಂ ಐದು ವರ್ಷ ಇರಬೇಕು ಎಂದರೆ ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷ ಇರುತ್ತಾರೆ. 15 ವರ್ಷ ಇರಬೇಕು ಎಂದರೆ 15 ವರ್ಷ ಇರುತ್ತಾರೆ. ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿರಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ರೇಖೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಆಕಾಂಕ್ಷೆಯಲ್ಲಿರುವವರಿಗೆ ಏನು ಹೇಳುತ್ತೀರಾ ಎಂದು ಕೇಳಿದಾಗ, ʼಅದೆಲ್ಲವನ್ನು ದೆಹಲಿ ನಾಯಕರು ಯಾವಾಗ, ಯಾವ ರೀತಿ ಮಾಡಬೇಕೋ ಮಾಡುತ್ತಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Karnataka GST Collection: ಜಿಎಸ್‌ಟಿ ಮಾಸಿಕ ವರದಿ: ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ
ರಾಜ್ಯ ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಟ್ಟಿಲ್ಲ; ಬಿಜೆಪಿ ಸಂಸದರ ವಿರುದ್ಧ ಡಿಕೆಶಿ ಕಿಡಿ
ನವದೆಹಲಿ, ನ.5: ಮೇಕೆದಾಟು ಸೇರಿದಂತೆ ರಾಜ್ಯದ ಜಲ ಯೋಜನೆಗಳು ವಿಳಂಬವಾಗದಂತೆ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸುವ ಬಗ್ಗೆ ಕಾನೂನು ತಂಡದ ಜತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ದೆಹಲಿಯಲ್ಲಿ ರಾಜ್ಯದ ಜಲ ಯೋಜನೆಗಳ ಸಂಬಂಧ ಕಾನೂನು ತಂಡ ಹಾಗೂ ಅಧಿಕಾರಿಗಳ ಜತೆಗಿನ ಸಭೆ ಬಳಿಕ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಸಭೆಯ ಬಗ್ಗೆ ಕೇಳಿದಾಗ, ʼಇದೊಂದು ಮಹತ್ವದ ಸಭೆ. ಇಂದಿನ ಸಭೆಯಲ್ಲಿ ಮೇಕೆದಾಟು (Mekedatu Project), ಕೃಷ್ಣಾ ಮೇಲ್ದಂಡೆ ( Krishna Upper River Project), ಮಹದಾಯಿ ಯೋಜನೆ (Mahadayi Project) ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಶ್ಯಾಮ್ ದಿವಾನ್, ಅಡ್ವೊಕೇಟ್ ಜನರಲ್, ಮೋಹನ್ ಕಾತರಾಕಿ ಹಾಗೂ ನಮ್ಮ ಅಧಿಕಾರಿಗಳು ಸೇರಿ ಈ ಸಭೆ ಮಾಡಿದ್ದೇವೆ. ಮೇಕೆದಾಟು ಯೋಜನೆ ಸಂಬಂಧ ವಿನಾಕಾರಣ ಸಮಯಾವಕಾಶದ ನೆಪದಲ್ಲಿ ವಿಚಾರಣೆ ಮುಂದೂಡಿಕೊಂಡೇ ಹೋಗಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದೇನೆ. ನ್ಯಾಯಾಲಯದಲ್ಲಿ ವಿಶೇಷ ಪೀಠ ರಚನೆಗೆ ಮುಂದಾಗಿದ್ದು, ಈಗ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದ್ದೇನೆ. ನಮ್ಮ ಸರ್ಕಾರದ ನಿರ್ಧಾರವನ್ನು ತಿಳಿಸಿದ್ದೇನೆ ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಈಗಾಗಲೇ ರೈತರಿಗೆ ಭೂ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಹೊಸ ಕಾಯ್ದೆ ಪ್ರಕಾರ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕಿದೆ. ಬೇರೆ ರಾಜ್ಯಗಳಲ್ಲಿ ಈ ಪ್ರಾಧಿಕಾರ ರಚನೆ ಆಗಿವೆ. ಬಿಹಾರದಲ್ಲಿ ಪ್ರಾಧಿಕಾರದ ಮೂಲಕ ಸಾವಿರಾರು ಪ್ರಕರಣ ಬಗೆಹರಿಸಲಾಗಿದೆ. ಕಾನೂನು ಉಪಯೋಗಿಸಿಕೊಳ್ಳಬೇಕು. ಮಹದಾಯಿ ಯೋಜನೆ ಸಂಬಂಧ ಕೆಲವು ದಾಖಲೆ ಸಿದ್ಧಪಡಿಸಲು ಸೂಚಿಸಿದ್ದು, ಈ ಬಗ್ಗೆ ಹೆಚ್ಚು ಮಾಹಿತಿ ನೀಡಲು ಆಗುವುದಿಲ್ಲ ಎಂದು ತಿಳಿಸಿದರು.
ಪದೇ ಪದೆ ವಿಚಾರಣೆ ಬರುತ್ತಿದೆ ಎಂದು ಕೇಳಿದಾಗ, ʼಇದೇ ಕಾರಣಕ್ಕೆ ನಾನು ಸೂಚನೆ ನೀಡಿದ್ದೇನೆ. ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸಚಿವರ ಪತ್ರ ನಮ್ಮ ಬಳಿ ಇದೆ. ಈ ಯೋಜನೆ ಅಂದಾಜು ವೆಚ್ಚ 9 ಸಾವಿರ ಕೋಟಿ ಇತ್ತು. ಈಗ 13-14 ಸಾವಿರ ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ನಾವು ವಿಳಂಬ ಮಾಡುವಂತಿಲ್ಲ. ನಾವು ತಮಿಳುನಾಡಿಗೆ ನಿಗದಿಯಾಗಿರುವ 177 ಟಿಎಂಸಿ ನೀರನ್ನು ನೀಡುತ್ತೇವೆ. ಅದರಲ್ಲಿ ಅನುಮಾನವಿಲ್ಲ. ಈ ಯೋಜನೆಯಲ್ಲಿ ವಿದ್ಯುತ್ ಉತ್ಪಾದನೆ ಕೂಡ ಇದೆ. ಹೀಗಾಗಿ ಕಾಲಹಾರಣ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದರು.
ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ
ಕೇಂದ್ರ ಸರ್ಕಾರದ ಮೇಲೆ ರಾಜಕೀಯವಾಗಿ ಒತ್ತಡ ಹಾಕುವ ಪ್ರಯತ್ನ ಮಾಡಲಾಗುವುದೇ ಎಂದು ಕೇಳಿದಾಗ, ʼಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಸಭೆ ಕರೆದರೂ ಅದನ್ನು ಮುಂದಕ್ಕೆ ಹಾಕುತ್ತಾರೆ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಸಂಸದರು ಒಂದೂ ದಿನ ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ಈ ವಿಚಾರಣೆ ಮುಗಿಯಲಿ, ಚಳಿಗಾಲದ ಅಧಿವೇಶನದ ವೇಳೆ ಮತ್ತೆ ಬಂದು ಸಭೆ ನಡೆಸುತ್ತೇನೆʼ ಎಂದರು.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಬಗ್ಗೆ ಕೇಳಿದಾಗ, ʼಸರ್ಕಾರ ಹಾಗೂ ಸ್ಥಳೀಯ ಸಚಿವರು ಸೇರಿ ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಅಲ್ಲಿನ ಬೆಲೆ, ದರಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ರಾಜ್ಯಕ್ಕೆ ಮರಳಿದ ನಂತರ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆʼ ಎಂದು ತಿಳಿಸಿದರು.
ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ʼನಾನು ಯಾರನ್ನೂ ಭೇಟಿ ಮಾಡುತ್ತಿಲ್ಲ. ಯಾರ ಜತೆಗೂ ಮಾತನಾಡುತ್ತಿಲ್ಲ, ಬಿಹಾರ ಚುನಾವಣೆ, ಮತಗಳ್ಳತನ ವಿಚಾರ ಸಂಬಂಧ ಜೂಮ್ ಸಭೆಯಲ್ಲಿ ಭಾಗವಹಿಸಿರುವೆʼ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | DK Shivakumar: ರಾಜ್ಯ ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಟ್ಟಿಲ್ಲ; ಬಿಜೆಪಿ ಸಂಸದರ ವಿರುದ್ಧ ಡಿಕೆಶಿ ಕಿಡಿ
ಬಿಹಾರಕ್ಕೆ ತೆರಳುವಿರಾ ಎಂದು ಕೇಳಿದಾಗ, ʼಹೈಕಮಾಂಡ್ ನಾಯಕರು ಹೋಗಲು ಹೇಳಿದರೆ, ಹೋಗುವೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.