ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

DK Shivakumar: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್‌ ಡಿನ್ನರ್ ಪಾರ್ಟಿ

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಮಾ‌ರ್ಚ್ 10ರಂದು ಡಿಸಿಎಂ ಡಿನ್ನರ್ ಪಾರ್ಟಿ

ಡಿಕೆ ಶಿವಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Mar 3, 2026 2:43 PM

ಬೆಂಗಳೂರು, ಮಾರ್ಚ್‌ 03 : ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿಕೆ ಶಿವಕುಮಾರ್ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ಶಾಸಕರಲ್ಲಿ ವಿಶ್ವಾಸ ಹಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ನಾಯಕರು ಕೂಡ ಈ ಪಾರ್ಟಿಗೆ ಬರುವ ಸಾಧ್ಯತೆ ಇದೆ.

ನಾನು- ಡಿಕೆಶಿ ಹಾಲು ಜೇನಿನಂತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ (R Ashok) ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ (HD Kumaraswamy) ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಟೀಕಿಸಿದ್ದಾರೆ.

DCM D.K. Shivakumar: ಜನವಿರೋಧಿ ಆಡಳಿತದ ಮೂಲಕ ಬಿಜೆಪಿ ಅಂತಿಮ ದಿನಗಳು ಸಮೀಪಿಸುತ್ತಿವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭವಿಷ್ಯ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರಕಾರದ ವರ್ಚಸ್ಸನ್ನು ಹಾಳುಗೆಡವಲು ಯತ್ನಿಸುತ್ತಿರುವ ಜೆಡಿಎಸ್‌ ಹಾಗೂ ಬಿಜೆಪಿಗಳನ್ನು ಕಟುವಾಗಿ ಟೀಕಿಸಿದರು.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ ಎಂದಿದ್ದಾರೆ.