ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ: ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಚರ್ಚೆ

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

Profile Siddalinga Swamy Apr 3, 2025 6:49 PM

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಗುರುವಾರ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.

ಸಭೆ ಫಲಪ್ರದವಾಗಿದ್ದು ʼಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿʼ ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ. 5ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ | BESCOM: ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳಿಗೆ 8 ಜಿಲ್ಲೆಗೆ ವಾಟ್ಸಾಪ್ ಸಂಖ್ಯೆ ನೀಡಿದ ಬೆಸ್ಕಾಂ

ಬಿಜೆಪಿ-ಜೆಡಿಎಸ್ ಒಂದೇ ನಾಣ್ಯದ 2 ಮುಖಗಳು ಎಂದ ಡಿಕೆಶಿ

ಹೊಸದಿಲ್ಲಿ: ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ದಿಲ್ಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಬೆಲೆ ಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆ ತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ. ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.