ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala chalo: ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿ ಪಕ್ಷದ ಶಾಸಕರೊಂದಿಗೆ ಮತ್ತೊಮ್ಮೆ ಮಂಜುನಾಥನ ವಿಶೇಷ ದರ್ಶನ ಪಡೆದು ವಾಪಸಾಗಲಿದ್ದಾರೆ.

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ (Dharmasthala) ಕುರಿತು ನಡೆಯುತ್ತಿರುವ ಅಪಪ್ರಚಾರ, ಅವಹೇಳನ (defamation) ಖಂಡಿಸಿ ಬಿಜೆಪಿ ಶಾಸಕ (BJP MLA) ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆಯಲಿದೆ. ಬೆಳಗ್ಗೆ 6.30ಕ್ಕೆ ಬೆಂಗಳೂರಿನ ನೆಲಮಂಗಲ ಟೋಲ್‌ ಬಳಿಯಿಂದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿ ಪಕ್ಷದ ಶಾಸಕರೊಂದಿಗೆ ಮತ್ತೊಮ್ಮೆ ಮಂಜುನಾಥನ ವಿಶೇಷ ದರ್ಶನ ಪಡೆದು ವಾಪಸಾಗಲಿದ್ದಾರೆ.

ಶುಕ್ರವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್‌, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಂಜೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಲ್ಪ ಮಾಡುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದರು.

ಇದನ್ನೂ ಓದಿ: Pralhad Joshi: ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿಯಲು ಸರ್ಕಾರದ್ದೂ ಸಾಥ್‌ ಇದೆಯೇ? ಜೋಶಿ ಪ್ರಶ್ನೆ

ಹರೀಶ್‌ ಕೇರ

View all posts by this author