ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

Profile Vishwavani News Jan 11, 2021 12:31 PM
ಬೆಂಗಳೂರು : ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಾದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭ ಗೊಂಡಿತ್ತು. ಇದರ ಜೊತೆಗೆ ಡಿಗ್ರಿ ಅಂತಿಮ ಹಾಗೂ ಡಿಪ್ಲೋಮಾ ತರಗತಿ ಕೂಡ ಆರಂಭಗೊಂಡಿದ್ದವು. ಇದೀಗ ಡಿಗ್ರಿ, ಪಿಜಿ ತರಗತಿ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಜನವರಿ 15ರಿಂದ ಡಿಗ್ರಿ, ಪಿಜಿ ತರಗತಿಗಳು ರಾಜ್ಯದಲ್ಲಿ ಆರಂಭಕ್ಕೆ, ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ, ಜನವರಿ 15 ರಿಂದ ಡಿಗ್ರಿ, ಪಿಜಿ ತರಗತಿ ಆರಂಭಗೊಳ್ಳಲಿವೆ. ಮೊದಲ 2ನೇ ವರ್ಷದ ಡಿಗ್ರಿ, ಪಿಜಿ ತರಗತಿ ಆರಂಭವಾಗಲಿದೆ. ಇಂಜಿನಿಯರಿಂಗ್ ಮೂರನೇ ವರ್ಷದ ತರಗತಿಗಳೂ ಶುರು ಮಾಡಲಾಗುತ್ತದೆ. ಜ.15ರಿಂದಲೇ ಡಿಪ್ಲೋಮಾ ಕೋರ್ಸ್ ಕ್ಲಾಸ್ ಆರಂಭಗೊಳ್ಳಲಿರುವುದಾಗಿ ತಿಳಿಸಿದ್ದಾರೆ.