ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Weather Forecast: ಇಂದಿನ ಹವಾಮಾನ; ಬೆಂಗಳೂರಲ್ಲಿ ದಟ್ಟ ಮಂಜು, ರಾಜ್ಯದ ಉಳಿದೆಡೆ ಒಣ ಹವೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಾಮಾನ; ಬೆಂಗಳೂರಲ್ಲಿ ದಟ್ಟ ಮಂಜು, ರಾಜ್ಯದ ಉಳಿದೆಡೆ ಒಣ ಹವೆ

Profile Prabhakara R Feb 14, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಇಳಿಕೆಯಾಗುತ್ತಿದ್ದು, ಬಿಸಿಲಿನ ಝಳ ಏರುತ್ತಿದೆ. ರಾಜ್ಯಾದ್ಯಂತ ಬುಧವಾರ ಒಣ ಹವೆಯ ಹವಾಮಾನ (Weather Forecast) ಕಂಡುಬಂದಿದೆ. ಇನ್ನು ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಕೆಳ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ/ಪೂರ್ವ ಹವಾಮಾನವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಹೆಚ್ಚು ಬದಲಾವಣೆ ಇಲ್ಲ. ಫೆ. 14ರಿಂದ 18 ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲೂ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.

ಇನ್ನು ಬುಧವಾರ ಚಾಮರಾಜನಗರದಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಕನಿಷ್ಠ ತಾಪಮಾನವು ರಾಜ್ಯದ ಕರಾವಳಿಯಲ್ಲಿ 19-22 °C, ಉತ್ತರ ಒಳನಾಡಿನಲ್ಲಿ 15-21 °C ಮತ್ತು ದಕ್ಷಿಣ ಒಳನಾಡಿನಲ್ಲಿ 11-17 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-6 ° C ಯಷ್ಟು ಕುಸಿದಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ ಹೆಚ್ಚು ಬದಲಾವಣೆ ಇರಲಿಲ್ಲ. ಕರಾವಳಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿದ್ದು, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ° C ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸುಮಾರು 4-5 ° C ರಷ್ಟು ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಗರಿಷ್ಠ ತಾಪಮಾನವು ಕರಾವಳಿಯಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ 33-36°C ಮತ್ತು ದಕ್ಷಿಣ ಒಳನಾಡಿನಲ್ಲಿ 31-34°C ವ್ಯಾಪ್ತಿಯಲ್ಲಿತ್ತು.

ಈ ಸುದ್ದಿಯನ್ನೂ ಓದಿ | Karnataka Weather: ಹವಾಮಾನ ವರದಿ; ಚಾಮರಾಜನಗರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು

ರಾಜ್ಯದ ಕಳೆದ 24 ಗಂಟೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ದಿನದ ತಾಪಮಾನದಲ್ಲಿ ಯಾವುದೇ ಹೆಚ್ಚು ಬದಲಾವಣೆಯಾಗಿಲ್ಲ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ° C ಗಿಂತ ಹೆಚ್ಚಾಗಿರುತ್ತದೆ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸುಮಾರು 2-4 °C ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಸಾಮಾನ್ಯವಾಗಿತ್ತು.