ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

Yaduveer Wadiyar:‌ ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ. ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ ಎಂದಿದ್ದಾರೆ ಯದುವೀರ್.

ಮೈಸೂರು: ಅಕ್ರಮವಾಗಿ ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ವಿಶೇಷ ತನಿಖಾ ದಳದ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ, ನಡೆಯುತ್ತಿರುವ ತನಿಖೆಯ ಪ್ರಗತಿಯನ್ನು ತಿಳಿದುಕೊಳ್ಳಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ. ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ. ಸರ್ಕಾರ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಿ ಎಲ್ಲಾ ಗೊಂದಲಗಳು ಮತ್ತು ಪಿತೂರಿಗಳನ್ನು ಕೊನೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ನಿಯೋಗ ಭೇಟಿ

ಮಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದ ಬಿಜೆಪಿ ಶಾಸಕರು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ (BJP Delegation visits Dharmasthala) ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ತಾವು ಧರ್ಮಸ್ಥಳದ ಪರವಾಗಿ ಇರುವುದಾಗಿ ನೈತಿಕ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ಶಾಸಕರ ನಿಯೋಗದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸ್ಥಳೀಯ ಶಾಸಕರಾದ ಹರೀಶ್ ಪೂಂಜಾ, ಬಿಜಿಪಿ ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: Laxmi Hebbalkar: ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದ ಹೆಬ್ಬಾಳ್ಕರ್‌

ಹರೀಶ್‌ ಕೇರ

View all posts by this author