Cylinder Blast: ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಿಂದ ಸಾವಿನ ಸಂಖ್ಯೆ 4ಕ್ಕೆ ಏರಿಕೆ
Cylinder Blast: ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಿಂದ ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಹರೀಶ್ ಕೇರ
December 28, 2024
ಹುಬ್ಬಳ್ಳಿ: ನಗರದಲ್ಲಿ (Hubballi news) ಡಿ.22ರಂದು ನಡೆದಿದ್ದ ಸಿಲಿಂಡರ್ ಸ್ಪೋಟ (Cylinder Blast) ಘಟನೆಯಲ್ಲಿ ಗಾಯಗೊಂಡವರಲ್ಲಿ ಇನ್ನಿಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ ಇದೀಗ 4ಕ್ಕೆ ಏರಿದೆ. 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಶುಕ್ರವಾರದಂದು ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.
ಶುಕ್ರವಾರದಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಹಾಗೂ ಲಿಂಗರಾಜು ಬೀರನೂರು(19) ಎಂಬವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾದಂತೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಐವರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Cylinder Blast: ಸಿಲಿಂಡರ್ ಸ್ಫೋಟ, 9 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ