ಧಾರವಾಡ: ಪಿಎಚ್‌ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ವಿರುದ್ಧ ವಿಶ್ವವಿದ್ಯಾಲಯ ಆಡಳಿತ ಶಿಸ್ತು ಕ್ರಮ ಕೈಗೊಂಡಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಈ ಕ್ರಮಕ್ಕೂ ಮುನ್ನ ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪ್ರೊಫೆಸರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಪ್ರೊ. ತಂಗುದೊರೈ ತಮ್ಮ ಬಳಿ ಪಿಎಚ್‌ಡಿ ಮಾಡಲು ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ವಿದ್ಯಾರ್ಥಿನಿ ಜತೆಗಿನ ಕೆಲ ಫೋಟೋಗಳನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ವಿದ್ಯಾರ್ಥಿನಿ ಅಧ್ಯಯನವನ್ನು ಮಧ್ಯದಲ್ಲೇ ಬಿಟ್ಟು ತೆರಳಿದ ನಂತರವೂ ಆಕೆಯನ್ನು ಮರಳಿ ಕರೆಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ವಿಚಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದರೂ ವಿಶ್ವವಿದ್ಯಾಲಯ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬುಧವಾರ ಭಾರೀ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಅಮಾನತು ಮಾಡಲಾಗಿದೆ.
ಗುಂಡ್ಲುಪೇಟೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್ ಹರಿದು 4 ವರ್ಷದ ಮಗು ಸಾವು
ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ
ಬೆಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಿಯಕರ ತನ್ನ ಲಿವ್ ಇನ್ ಗೆಳತಿಯ (Live in Relationship) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ರಾತ್ರಿ (Murder Case) ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶರತ್ ಹಾಗೂ ಅನುಷಾ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್ ವಾಟರ್ ಟ್ಯಾಂಕ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಮೂಲತಃ ಹಾಸನದವರಾದ ಇವರು 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್ ಇನ್‌ನಲ್ಲೇ ವಾಸವಿದ್ದರು. ವಯಕ್ತಿಕ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಸಿಟ್ಟಲ್ಲಿ ಶರತ್ ಅನುಷಾಳ ಕತ್ತು ಹಿಸುಕಿದ್ದು, ಆಕೆ ಮೃತಪಟ್ಟಿದ್ದಾಳೆ. ಕೊಲೆಯಾದ ಬಗ್ಗೆ ಶರತ್ ಸೋಮವಾರ ವಕೀಲರಿಗೆ ವಿಚಾರ ತಿಳಿಸಿದ್ದ. ಬಳಿಕ ವಕೀಲರು ಪೊಲೀಸರಿಗೆ ವಿಚಾರ ತಿಳಿದ್ದಾರೆ. ಬಳಿಕ ಶೇಷಾದ್ರಿಪುರಂ ಪೊಲೀಸರು ಪರಿಶೀಲನೆ ನಡೆಸಿ, ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಅನುಷಾ ಮೃತದೇಹವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಿಲಾಗಿದೆ.