ಹುಬ್ಬಳ್ಳಿ: ಜಮೀನು ವಿವಾದಕ್ಕೆ ಸಂಬಂಧಿಸಿ ಪೊಲೀಸರ ವಿಚಾರಣೆಗೆ ಹೆದರಿ ರೈತನೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ವೇಳೆ ರೈತನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಮೀನಿನಲ್ಲಿ ದಾರಿ ವಿಚಾರಕ್ಕೆ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪನನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಪಂಚಾಯಿತಿ ಸದಸ್ಯರು, ನಿಂಗಪ್ಪ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಸಹ ಎರಡ್ಮೂರು ದಿನಗಳಿಂದ ನಿಂಗಪ್ಪನಿಗೆ ಕರೆ ಮಾಡಿ ಠಾಣೆಗೆ ವಿಚಾರಣೆ ಬರುವಂತೆ ಸೂಚಿಸಿದ್ದಾರೆ. ಇಂದು ಸಹ ಪೊಲಿಸರು, ನಿಮ್ಮ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸ್ಟೆಷನ್ಗೆ ಬನ್ನಿ ಎಂದು ನಿಂಗಪ್ಪನಿಗೆ ಕರೆ ಮಾಡಿ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಪಂಚಾಯಿತಿ ಸದಸ್ಯರ ಹಲ್ಲೆಯಿಂದ ಮನನೊಂದಿದ್ದ ನಿಂಗಪ್ಪನಿಗೆ ಪೊಲೀಸರು ಸಹ ಮೇಲಿಂದ ಮೇಲೆ ಕರೆ ಮಾಡಿ ಠಾಣೆಗೆ ಬರುವಂತೆ ಒತ್ತಾಯಿಸಿದ್ದರಿಂದ ಭಯಗೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಎಂಬ ಆರೋಪ ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಳ್ಳುವುದರ ಕುರಿತು ಸರ್ಚ್ ಮಾಡಿದ್ದ ವಿದ್ಯಾರ್ಥಿನಿಯರು ದೇವಾಲಯದ ಸ್ನಾನಗೃಹದಲ್ಲಿ ಶವವಾಗಿ ಪತ್ತೆ!
ನಾಯಿ ಕೊಂದು ಬಸ್ ತಂಗುದಾಣದಲ್ಲಿ ನೇತು ಹಾಕಿದ ಕಿಡಿಗೇಡಿಗಳು!
ತಿಪಟೂರು: ನಗರದ (Tiptur) ಬೈಪಾಸ್ ರಸ್ತೆಯಲ್ಲಿ ನೂರಾರು ಜನ ಕುಳಿತು ಹೋಗುವ ತಂಗುತಾಣದಲ್ಲಿ ಅಮಾನುಷ ಕೃತ್ಯ ನಡೆದಿರುವುದು ಕಂಡುಬಂದಿದೆ. ನಾಯಿಯನ್ನು ಕೊಂದು ತಂಗುದಾಣದಲ್ಲಿ ನೇತು ಹಾಕಿದ್ದು, 4- 5 ದಿನಗಳ ಹಿಂದೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ಸರ್ವಿಸ್ ರಸ್ತೆಗೆ ಹೊಂದಿಕೊಂಡಂತಿರುವ ಈ ತಂಗುದಾಣದ ಪಕ್ಕ ಪಕ್ಕ ಓಡಾಡುವವರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ಉಂಟಾಗಿದೆ. ಪ್ರತಿದಿನ ಗಸ್ತು ಹಾಕುವ ಸಂಚಾರಿ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಗಸ್ತು ಹಾಕುವವರು ಇಂತಹ ಘಟನೆ ಕಂಡರೂ ಕಾಣದಂತೆ ಇದ್ದಾರೆ. ಇನ್ನು ಬೈಪಾಸ್ ರಸ್ತೆಯು ಅನೈತಿಕ ಚಟುವಟಿಕೆಗಳ ತಾಣವಾಗಿ ಬದಲಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೃತ್ಯ ಹೆಸಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.