ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dharwad Accident: ಧಾರವಾಡದಲ್ಲಿ ಭೀಕರ ಅಪಘಾತ; ಕ್ಯಾಂಟರ್‌-ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರ ಸಾವು!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಕಾರು ಮತ್ತು ಕ್ಯಾಂಟರ್‌ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ (Dharwad Accident) ನಾಲ್ವರು ಮೃತಪಟ್ಟಿದ್ದಾರೆ. ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಮೃತ ದುರ್ದೈವಿಗಳು. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರೆಲ್ಲ ವಿಜಯಪುರ ಜಿಲ್ಲೆಯವರು. ಮೃತದೇಹಗಳನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ; ಚಾಲಕ ಸಾವು, 12 ಪ್ರಯಾಣಿಕರಿಗೆ ಗಾಯ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟಿಪ್ಪರ್‌ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸ್ಥಳೀಯ ಪೊಲೀಸರ ಪ್ರಕಾರ, ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಹಾಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ ಮುಂದಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುರ್ತು ಸೇವಾ ಸಿಬ್ಬಂದಿ ಗಾಯಗೊಂಡ 12 ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.