ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಲ್ಲಭ ಚೈತನ್ಯರ ಜಯಂತಿ ಹಿನ್ನೆಲೆ ಹುಬ್ಬಳ್ಳಿಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

Sri Vallabha Chaitanya Maharaj Jayanti: ಶ್ರೀ ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಶ್ರೀ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಹುಬ್ಬಳ್ಳಿಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಹುಬ್ಬಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ. -

Profile
Siddalinga Swamy Dec 1, 2025 10:02 PM

ಹುಬ್ಬಳ್ಳಿ, ಡಿ.1: ಶ್ರೀ ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿಯನ್ನು (Sri Vallabha Chaitanya Maharaj Jayanti) ಸಂಭ್ರಮಭರಿತವಾಗಿ ಆಚರಿಸುವ ಭಾಗವಾಗಿ, ಶ್ರೀ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈತನ್ಯ ಯುವ ಸಮಿತಿ ಸಂಯುಕ್ತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು (Free Health check up camp) ಆಯೋಜಿಸಲಾಗಿತ್ತು. ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು.

ಶಿಬಿರದಲ್ಲಿ 250ಕ್ಕೂ ಹೆಚ್ಚು ರೋಗಿಗಳು ಮಧುಮೇಹ, ರಕ್ತದ ಒತ್ತಡ, ಮಾನಸಿಕ ಆರೋಗ್ಯ, ನೇತ್ರ ತಪಾಸಣೆ, ಇಸಿಜಿ ಸೇರಿದಂತೆ ಸೈಕ್ಯಾಟ್ರಿಕ್‌ ಕಾಯಿಲೆಗಳ ತಪಾಸಣೆಗೆ ಒಳಗಾದರು. ತಪಾಸಣೆ ಬಳಿಕ ಅಗತ್ಯ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಗ್ರಾಮೀಣ ಭಾಗದ ಜನರು ಈ ಶಿಬಿರದಿಂದ ಹೆಚ್ಚಿನ ಪ್ರಯೋಜನ ಪಡೆದುಕೊಂಡರು. ತಮ್ಮ ಆರೋಗ್ಯದ ಬಗ್ಗೆ ಅರಿವು ಹೆಚ್ಚಿಸಿಕೊಂಡ ಜನರು ವೈದ್ಯರೊಂದಿಗೆ ಸಂವಾದ ನಡೆಸಿ ಸೂಕ್ತ ಸಲಹೆ–ಸೂಚನೆಗಳನ್ನು ಪಡೆದರು.

ಶಿಬಿರವನ್ನು ಯಶಸ್ವಿಯಾಗಿ ನಡೆಸುವಲ್ಲಿ ಹುಬ್ಬಳ್ಳಿ ಹಾಗೂ ಹಾವೇರಿ ಜಿಲ್ಲೆಗಳ ಪ್ರಮುಖ ವೈದ್ಯರು ತಮ್ಮ ಅಮೂಲ್ಯ ಸೇವೆ ಸಲ್ಲಿಸಿದರು. ಸಮಾಜಕ್ಕೆ ಮರಳಿ ಕೊಡುವ ಮನೋಭಾವದೊಂದಿಗೆ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಬಿರದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿದರು.‌

ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ. ಪ್ರಭಾಕರ್

20ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಎಚ್‌ಸಿಜಿ ಹಾಸ್ಪಿಟಲ್ ಐ ಬಡ್ಡಿ ಹಾಸ್ಪಿಟಲ್ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಸಹಕಾರ ನೀಡಿದ್ದಾರೆ. ಯುವಕರಲ್ಲಿ ರಕ್ತದಾನದ ಮಹತ್ವವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ರಕ್ತದಾನ ಶಿಬಿರಕ್ಕೂ ಉತ್ತಮ ಪ್ರತಿಕ್ರಿಯೆ ದೊರೆಯಿತು. 20ಕ್ಕೂ ಹೆಚ್ಚು ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಮಾನವೀಯತೆಗೆ ಮಾದರಿಯಾದರು. ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣಪತ್ರ ಹಾಗೂ ಗೌರವಾರ್ಪಣೆ ಮಾಡಲಾಯಿತು.