ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಭೀಕರ ಅಗ್ನಿ ಅವಘಡ; ಇಬ್ಬರ ಸಾವು, ಒಬ್ಬರ ಸ್ಥಿತಿ ಗಂಭೀರ

Hubballi Gas cylinder explosion: ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದ ಮನೆಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರ ಸಾವು, ಒಬ್ಬರಿಗೆ ಗಾಯ

-

Prabhakara R
Prabhakara R Sep 20, 2026 3:10 PM

ಹುಬ್ಬಳ್ಳಿ: ಗ್ಯಾಸ್ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ (Gas cylinder explosion) ಇಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ನಡೆದಿದೆ. ಪ್ರವೀಣ್ ಕಲಾಲ್ (46) ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ (40) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮನ ಕಲಾಲ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯಲ್ಲಿದ್ದ ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಿಲಿಂಡ‌ರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುಮನ ಕಲಾಲ್‌ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ರಾಯಚೂರಿನಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಭೀಕರ ಹತ್ಯೆ; ರಕ್ತಸಿಕ್ತವಾಗಿದ್ದ ತಾಯಿಯ ಬಳಿ ಕುಳಿತು 2 ವರ್ಷದ ಮಗು ರೋದನೆ

ಮೃತ ಪ್ರವೀಣ್ ಕಲಾಲ್ ಅವರು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.