ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Car Accident: ಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್‌ ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ದುರ್ಗಘಟನೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ಅಧಿಕಾರಿ ಪಂಚಾಕ್ಷರಿ ಸಾಲಿಮಠ್‌

ಧಾರವಾಡ: ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್‌ ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ದುರ್ಗಘಟನೆಯಲ್ಲಿ ಮೃತಪಟ್ಟಿದ್ದಾರೆ. ಸಾಲಿಮಠ ಅವರು ನಿನ್ನೆ ರಾತ್ರಿ (ಶುಕ್ರವಾರ) ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.

ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಇನ್ಸ್​ಪೆಕ್ಟರ್ PS ಸಾಲಿಮಠ ಅವರಿಗೆ ​​ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

PS ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕುಟುಂಬವನ್ನು ಭೇಟಿಯಾಗಲು ಗದಗಿಗೆ ತೆರಳುತ್ತಿದ್ದರು. ಆದರೆ ಅಷ್ಟರಲ್ಲಾಗಲೇ ಈ ಅವಘಢ ಸಂಭವಿಸಿದೆ. ಕಳೆದ ವಾರ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದರು.

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. 1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.