ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನೌಕರರನ್ನು ವಜಾಗೊಳಿಸುವ ಮುನ್ನ ವಿಚಾರಣೆ ಕಡ್ಡಾಯ: ಹೈಕೋರ್ಟ್‌ ಮಹತ್ವದ ತೀರ್ಪು

Government Employees: ನೌಕರನ ಮೇಲೆ ಆರೋಪವಿದ್ದಾಗ, ಅದು ಆತನ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದಾಗಿರುತ್ತದೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸುವುದು ಮತ್ತು ನೌಕರನಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡುವುದು ಕಡ್ಡಾಯ ಎಂದು ಹೈಕೋರ್ಟ್‌ ಧಾರವಾಡ ಪೀಠ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್‌ ಧಾರವಾಡದ ಪೀಠ.

ಧಾರವಾಡ: ಸಾರಿಗೆ ಬಸ್ ನೌಕರನ ವಜಾ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನೌಕರನ ಮೇಲೆ ಗಂಭೀರ ಆರೋಪಗಳಿದ್ದರೂ ಸೂಕ್ತ ಇಲಾಖಾ ವಿಚಾರಣೆ ನಡೆಸದೆ ಮತ್ತು ಆತನ ವಾದ ಆಲಿಸದೆ ಸೇವೆಯಿಂದ ವಜಾ ಮಾಡುವುದು (dismissing employees) ಕಾನೂನು ಬಾಹಿರ ಎಂದು ಹೈಕೋರ್ಟ್ ತಿಳಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ತನ್ನ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಧಾರವಾಢ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಬೆಳಗಾವಿಯ ಗೋಕಾಕ್ ತಾಲೂಕಿನ ಸಂಜುಕುಮಾ‌ರ್ ಎಂಬುವರು, ನಿಗಮದ ನೌಕರರಾಗಿದ್ದ ತಂದೆಯ ನಿಧನದ ನಂತರ ಅನುಕಂಪದ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದರು. ಆದರೆ, ನಕಲಿ ಶೈಕ್ಷಣಿಕ ದಾಖಲೆಗಳನ್ನು ಕೆಲಸಕ್ಕೆ ಸೇರಿದ್ದಾರೆ ಎಂಬ ಆರೋಪದಲ್ಲಿ ಅವರನ್ನು 2024ರ ಡಿ.13ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠವು, ನೌಕರನ ಮೇಲೆ ನಕಲಿ ದಾಖಲೆ ನೀಡಿದ ಆರೋಪವಿದ್ದಾಗ, ಅದು ಆತನ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದಾಗಿರುತ್ತದೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸುವುದು ಮತ್ತು ನೌಕರನಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡುವುದು ಕಡ್ಡಾಯ ಎಂದು ಹೇಳಿದೆ.

ನೌಕರನು ಪ್ರೊಬೇಷನರಿ ಅವಧಿಯಲ್ಲಿದ್ದರೂ, ಆತನ ವಜಾ ಆದೇಶವು ಶಿಕ್ಷಾರ್ಹ ರೂಪದಲ್ಲಿದ್ದರೆ, ಅದಕ್ಕೂ ಮುನ್ನ ವಿಚಾರಣೆ ನಡೆಸಲೇಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರರ ವಜಾ ಆದೇಶವನ್ನು ರದ್ದುಪಡಿಸಿರುವ ನ್ಯಾಯಾಲಯ, ತಕ್ಷಣವೇ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ನಿಗಮಕ್ಕೆ ನಿರ್ದೇಶನ ನೀಡಿದೆ. ಅಲ್ಲದೇ ಇಲಾಖಾ ವಿಚಾರಣೆ ನಡೆಸಿ ಪ್ರಕರಣವನ್ನು ಕಾನೂನುಬದ್ಧವಾಗಿ ನಿರ್ಧರಿಸುವ ಸ್ವಾತಂತ್ರ್ಯ ನಿಗಮಕ್ಕಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಪಠ್ಯ ಪುಸ್ತಕದಲ್ಲಿ ವಿವಾದಾತ್ಮಕ ಅಧ್ಯಾಯ: ಎನ್‌ಸಿಇಆರ್‌ಟಿಗೆ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಶಾಸಕ ವಿನಯ್‌ ಕುಲಕರ್ಣಿಗೆ ರಿಲೀಫ್‌; ಸುಪ್ರೀಂ ಕೋರ್ಟ್‌ನಿಂದ ಜಾಮೀನು

ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh gowda murder Case) ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಸುಪ್ರೀಂ ಕೋರ್ಟ್ (Supreme court) ಜಾಮೀನು ನೀಡಿದೆ. ಈ ವೇಳೆ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸದ್ಯ ಕಾಂಗ್ರೆಸ್‌ ಶಾಸಕನಿಗೆ ರಿಲೀಫ್ ಸಿಕ್ಕಿದೆ.

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.

ಸುಪ್ರೀಂ ಕೋರ್ಟ್​ನ ನ್ಯಾ. ಸಂಜಯ್ ಕರೋಲ ಅವರ ಪೀಠದಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಆರೋಪದ ಮೇಲೆ ಜಾಮೀನು ರದ್ದಾಗಿತ್ತು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು.

ಏನಿದು ಪ್ರಕರಣ?

ಬಿಜೆಪಿ ಜಿ.ಪಂ ಸದಸ್ಯ ಯೋಗೇಶ್ ಗೌಡರನ್ನು ಧಾರವಾಡದ ಜಿಮ್‌ನಲ್ಲಿ ಜೂನ್ 15, 2016ರಂದು ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಸಹೋದರ ಹಾಗೂ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಯಾಗಬೇಕು ಎಂದು ಅಂದಿನ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು. ಪ್ರಕರಣವನ್ನು ಸರಕಾರ ಎಸ್‌ಐಟಿಗೆ ವಹಿಸಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ದೋಷಾರೋಪ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದೆ.