ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vinay Kulkarni: ವಿನಯ್‌ ಕುಲಕರ್ಣಿಗೆ ಗುಡ್‌ ನ್ಯೂಸ್‌; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಶಾಸಕರಾಗಿ ತಮ್ಮ ಅಧಿಕೃತ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಹಸಿರು ನಿಶಾನೆ ಸಿಕ್ಕಿದೆ. ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.

ಧಾರವಾಡ ಶಾಸಕ ವಿನಯ್‌ ಕುಲಕರ್ಣಿ.

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೊಂದು ಗುಡ್‌ ನ್ಯೂಸ್‌ ಸಿಕ್ಕಿದೆ. ಧಾರವಾಡ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂಬ ತೀರ್ಪಿಗೆ ಹೈಕೋರ್ಟ್ ತಡೆ ನೀಡಿ, ಜಾಮೀನು ಮಂಜೂರು ಮಾಡಿತ್ತು. ಇದೀಗ ಅವರ ಶಾಸಕ ಸ್ಥಾನವೂ ಮರಳಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿ ವಿಧಾನಸಭೆ ಸಚಿವಾಲಯದಿಂದ ಸುತ್ತೋಲೆ ಹೊರಡಿಸಲಾಗಿದೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಿನಯ್ ಕುಲಕರ್ಣಿ ಕೊಲೆ ಕೇಸ್‌ನಲ್ಲಿ ದೋಷಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಕೆಲ ದಿನಗಳ ಹಿಂದಷ್ಟೇ ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದರಿಂದ ಜೈಲಿನಿಂದ ವಿನಯ್ ಕುಲಕರ್ಣಿ ಬಿಡುಗಡೆಯಾಗಿದ್ದರು.

ವಿಧಾನಸಭೆ ಸಚಿವಾಲಯ ಸುತ್ತೋಲೆ

ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ನಂತರ ವಿಧಾನಸಭೆಯು ಅವರ ಸದಸ್ಯತ್ವವನ್ನು ಪುನಃಸ್ಥಾಪಿಸಿದೆ. ಆಗಸ್ಟ್ 3ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ, ಕುಲಕರ್ಣಿ ಅವರ ವಿರುದ್ಧದ ಮೇ 2, 2026 ರಂದು ಹೊರಡಿಸಲಾದ ಅನರ್ಹತಾ ಆದೇಶವನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಈ ಅಧಿಸೂಚನೆಯನ್ನು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹೊರಡಿಸಿದ್ದಾರೆ. ಆದೇಶದ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.



ಡಿಕೆಶಿ ಸಂಪುಟದ ಸಚಿವರಾಗಿ ಅಜಯ್ ಧರಮ್ ಸಿಂಗ್, ಬಾಲಕೃಷ್ಣ ಸೇರಿ 19 ಮಂದಿ ಪ್ರಮಾಣವಚನ ಸ್ವೀಕಾರ; ಇಲ್ಲಿದೆ ನೂತನ ಸಚಿವರ ಪಟ್ಟಿ


ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್‌ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚಿನ ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿ ಶಿಕ್ಷೆ ಮತ್ತು ದೋಷನಿರ್ಣಯವನ್ನು ಅಮಾನತು ಮಾಡಿ ಜಾಮೀನು ನೀಡಲಾಗಿದೆ. ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಜಿಮ್‌ನಲ್ಲಿ ಬಿಜೆಪಿ ಮುಖಂಡ ಮತ್ತು ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡರನ್ನು ಕೊಲೆ ಮಾಡಲಾಗಿತ್ತು.