ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vinay kulkarni: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ; ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

Yogesh Gowda murder case: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ವಿನಯ್‌ ಕುಲಕರ್ಣಿ.

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay kulkarni) ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ. ಭಾರತೀಯ ಸಂವಿಧಾನ ಮತ್ತು ಜನಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳ ಅನ್ವಯ, ಏಪ್ರಿಲ್ 15ರಿಂದ ಅನ್ವಯವಾಗುವಂತೆ ವಿನಯ್ ಕುಲಕರ್ಣಿ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್ 191(1)(ಸಿ) ಹಾಗೂ 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ವಿನಯ್‌ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶಾಸಕ ಸ್ಥಾನ ತೆರವಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರವು ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ.

Job Recruitment: ಮಂಜೂರಾತಿ ನೀಡಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಏನಿದು ಪ್ರಕರಣ?

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಪ್ರಮುಖ ಆರೋಪಿಯಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಶಾಸಕರನ್ನು ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆಯಡಿ ಯಾವುದೇ ಶಾಸಕರು ಅಥವಾ ಸಂಸದರಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದಾಗ ಸದಸ್ಯತ್ವ ರದ್ದಾಗುತ್ತದೆ. ಈ ನಿಯಮದಂತೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ. ಮೇಲ್ಮನವಿಯಲ್ಲಿ ಉನ್ನತ ನ್ಯಾಯಾಲಯವು ಶಿಕ್ಷೆಗೆ ತಡೆಯಾಜ್ಞೆ ನೀಡದ ಹೊರತು ಶಾಸಕ ಸ್ಥಾನ ಮರುಸ್ಥಾಪನೆಯಾಗುವುದು ಕಷ್ಟ.