LPG cylinder Blast: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 7ಕ್ಕೆ ಏರಿಕೆ
LPG cylinder Blast: ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಇಬ್ಬರು ಅಯ್ಯಪ್ಪ ಭಕ್ತರು ಸದ್ಯ ಹುಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Prabhakara R
December 30, 2024
ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ (LPG cylinder Blast) ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದು, ಇದರಿಂದ ಈ ಪ್ರಕರಣದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಇಬ್ಬರು ಅಯ್ಯಪ್ಪ ಭಕ್ತರು ಸದ್ಯ ಹುಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದು, ಅಡುಗೆ ಅನಿಲ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ನಿದ್ದೆಗಣ್ಣಿನಲ್ಲಿ ಸಿಲಿಂಡರ್ ಬೀಳಿಸಿದ್ದ ಅಯ್ಯಪ್ಪ ಮಾಲಾಧಾರಿ ಈ ದುರಂತಕ್ಕೆ ಅಯ್ಯಪ್ಪ ಮಾಲಾಧಾರಿಯೊಬ್ಬರ ನಿದ್ದೆಗಣ್ಣು ಕಾರಣ ಎಂದು ಹೇಳಲಾಗಿದ್ದು, ಅಯ್ಯಪ್ಪ ಮಾಲೆ ಧರಿಸಿ ವೃತ ಅಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲಿಂಡರ್‌ಗೆ ತಾಗಿ ಅದು ಉರುಳಿದೆ. ಈ ವೇಳೆ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿದೆ.
ಇದೇ ವೇಳೆ ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ಗ್ಯಾಸ್ ತಾಗಿ ಬೆಂಕಿ ಹೊತ್ತುಕೊಂಡು ಸಿಲಿಂಡರ್ ಸ್ಫೋಟವಾಗಿದೆ. ದೇವಸ್ಥಾನದ ಪ್ರಾಂಗಣದಲ್ಲೆಲ್ಲಾ ಬೆಂಕಿಹೊತ್ತುಕೊಂಡ ಹಿನ್ನೆಲೆ ಸ್ಥಳೀಯರು ಬೆಂಕಿಗೆ ತುತ್ತಾಗಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | New Year Celebration: ಬೆಂಗಳೂರಲ್ಲಿ ಡಿ.31ರ ರಾತ್ರಿ ಎಲ್ಲ ಮೇಲ್ಸೇತುವೆಗಳಲ್ಲಿ ಸಂಚಾರ ನಿರ್ಬಂಧ; ಈ ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ
ಮೇಲಧಿಕಾರಿಗಳ ಕಿರುಕುಳ: ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡೇ ಕೆಎಸ್‌ಡಿಎಲ್ ಅಧಿಕಾರಿ ಆತ್ಮಹತ್ಯೆ!
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧಿಕಾರಿ(KSDL Officer) ಅಮೃತ್ ಶಿರಿಯೂರ್(Amruth Shiriyuru) ಎಂಬುವವರು ಕೈಯಲ್ಲಿ ಡೆತ್‌ನೋಟ್(Death Note) ಹಿಡಿದುಕೊಂಡು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಇಂದು ಬೆಳಕಿಗೆ ಬಂದಿದೆ.
ಅಮೃತ್ ಶಿರಿಯೂರ್(40) ಎಂಬ ವ್ಯಕ್ತಿ ಕೆಎಸ್‌ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಹಿರಿಯ ಅಧಿಕಾರಿಗಳು ವಿಪರೀತ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರ ಜತೆಗೆ ತಂದೆಗೆ ಒಳ್ಳೆಯ ಮಗ ಆಗಲಿಲ್ಲ. ಹೆಂಡತಿಗೆ ಒಳ್ಳೆಯ ಗಂಡನೂ ಆಗಲಿಲ್ಲ ಎಂದು ಉಲ್ಲೇಖಿಸಿರುವ ಅಮೃತ್ ಶಿರಿಯೂರ್ ಅವರು, ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರದಲ್ಲಿ ಬರೆದಿದ್ದಾರೆ. ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೃತ್ ಶಿರಿಯೂರ್ 2019ರಲ್ಲಿ ಎರಡನೇ ವಿವಾಹವಾಗಿದ್ದರು. ಎರಡನೇ ವಿವಾಹವಾಗಿದ್ದರೂ ಪತಿ-ಪತ್ನಿ ನಡುವೆ ಪ್ರತಿದಿನ ಜಗಳವಾಗುತ್ತಿತ್ತು. ಕೌಟುಂಬಿಕ ಕಲಹಗಳಿದ್ದವು. ಮೊದಲ ಮದುವೆಯ ಡಿವೋರ್ಸ್ ವಿಚಾರವಾಗಿಯೂ ಆಗಾಗ್ಗೆ ಜಗಳವಾಗುತ್ತಿತ್ತು ಎನ್ನಲಾಗಿದೆ. ಅಮೃತ್ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ನಾನು ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಪತಿಯೂ ಆಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಅಮೃತ್ ಶಿರಿಯೂರ್ ತಮ್ಮ ಬಾಡಿಗೆ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣಕ್ಕೆ ಮನೆಯ ಮಾಲೀಕರು ಮನೆಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮಹಾಲಕ್ಷ್ಮೀ ಠಾಣೆ ಪೊಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.